spot_img
Thursday, April 30, 2026
spot_img

ಸಾಧನೆಯ ಮೂಲಕ ಯಶಸ್ಸಿನ ಮೆಟ್ಟಿಲೇರಬೇಕು-ಡಾ.ಯಂಡಮೂರಿ ವೀರೇಂದ್ರನಾಥ್

ಕುಂದಾಪುರ: ನಮ್ಮ ಯಶಸ್ಸಿಗೆ ನಾವೇ ನಮ್ಮನ್ನು ಪರಿಪೂರ್ಣವಾಗಿ ತೊಡಗಿಸಿಕೊಂಡು ಕಾರ್ಯ ಸಾಧನೆಯ ಮೂಲಕ ಯಶಸ್ಸಿನ ಮೆಟ್ಟಿಲೇರಬೇಕು. ಇದಕ್ಕೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಅತೀ ಮುಖ್ಯ ಎಂದು ವಿಜಯಕ್ಕೆ ಐದು ಮೆಟ್ಟಿಲು ಖ್ಯಾತಿಯ ಹಿರಿಯ ಕಾದಂಬರಿಕಾರ ಡಾ. ಯಂಡಮೂರಿ ವೀರೇಂದ್ರನಾಥ್ ಹೇಳಿದರು.

ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗಾಗಿ ಒಂದು ದಿನದ ಜ್ಞಾನ ವಿಕಾಸ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಕೆ. ಸೀತಾರಾಮ ನಕ್ಕತ್ತಾಯ ಇವರು ಕಾರ್ಯಾಗಾರವನ್ನು ಅರಿವೆ ಜ್ಯೋತಿ ಎನ್ನುವಂತೆ ವಿದ್ಯುಕ್ತವಾಗಿ ಉದ್ಘಾಟಿಸಿ ಮಾತುಗಳನ್ನಾಡಿದರು.

ಅಂದದ ಕೈಬರಹದ ತರಬೇತುದಾರರೂ, ವಾಗ್ಮಿಯೂ ಆದ ವೈ. ಮಲ್ಲಿಕಾರ್ಜುನ ರಾವ್ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಡಾ. ಯಂಡಮೂರಿಯವರ ಸ್ಫೂರ್ತಿಭರಿತ ಮಾತುಗಳಿಂದ ಪ್ರೇರೇಪಿತರಾದ ವಿದ್ಯಾರ್ಥಿಗಳು ಗಣ್ಯರನ್ನು ಸನ್ಮಾನಿಸಿದರು.

ಹತ್ತನೇ ತರಗತಿ ವಿದ್ಯಾರ್ಥಿನಿ ಸ್ಪಂದನಾ ಪಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!