spot_img
Thursday, April 30, 2026
spot_img

ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ರಚನೆಗೆ ಹರ್ಷ

ಕುಂದಾಪುರ: ವಿಶ್ವ ಬಂಟರ ಸಮ್ಮೇಳನೆಯ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ರಚಿಸುವುದಾಗಿ ತಿಳಿಸಿರುವುದಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘದ ಕುಂದಾಪುರ ತಾಲ್ಲೂಕು ಸಮಿತಿಯ ಮಾಜಿ ಸಹ ಸಂಚಾಲಕ ಕೆ. ವಿಕಾಸ್ ಹೆಗ್ಡೆ ಮುಖ್ಯಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಚುನಾವಣೆ ಪೂರ್ವ ಪಂಚ ಗ್ಯಾರಂಟಿಗಳನ್ನು ಘೋಷಿಸುವುದರ ಜೊತೆ ಚುನಾವಣಾ ಪೂರ್ವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಕರಾವಳಿಯ ಅತೀ ದೊಡ್ಡ ಸಮುದಾಯವಾದ ಬಂಟ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ರಚಿಸುವುದಾಗಿ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಈಗಾಗಲೇ ಪಂಚ ಗ್ಯಾರಂಟಿಗಳಲ್ಲಿ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷ, ಬಂಟ ಸಮುದಾಯಕ್ಕೆ ನೀಡಿದ ಅಭಿವೃದ್ಧಿ ನಿಗಮದ ಆಶ್ವಾಸನೆಯನ್ನು ವಿಶ್ವ ಬಂಟರ ಸಮ್ಮೇಳನದಲ್ಲಿ ಮುಖ್ಯಮಂತ್ರಿಯವರು ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ರಸಿಸುವ ಭರವಸೆ ನೀಡುವುದರ ಮೂಲಕ ಕರಾವಳಿಯ ಕಲೆ, ಸಾಹಿತ್ಯ, ಸಂಸ್ಕೃತಿ, ಧಾರ್ಮಿಕತೆಯ ಅತೀ ದೊಡ್ಡ ಪೋಷಕ ಹಾಗೂ ಆರಾಧಕ ಸಮುದಾಯವಾದ ಬಂಟ ಸಮುದಾಯಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ ಹಾಗೂ ಬಂಟರಲ್ಲಿ ಇಂದೂ ಒಂದಷ್ಟು ಕುಟುಂಬ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದಿದ್ದು ಅವರ ಏಳಿಗೆಗೂ ಇದು ಸಹಕಾರಿಯಾಗಲಿದೆ ಎಂದು ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!