spot_img
Thursday, April 30, 2026
spot_img

ಕುಂದಾಪುರದಲ್ಲಿ ರಾಜ್ಯೋತ್ಸವ ತಾಳಮದ್ದಲೆ: ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ

ಕುಂದಾಪುರ: ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ, ಕಾಲೇಜಿನ ಆವರ್ತ ಯಕ್ಷಗಾನ ಸಂಘದ ಆಶ್ರಯದಲ್ಲಿ 48ನೇ ವರ್ಷದ ರಾಜ್ಯೋತ್ಸವ ತಾಳಮದ್ದಲೆ ಮತ್ತು ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಕಾರ್ಯಕ್ರಮ ನ.1 ಬುಧವಾರ ಅಪರಾಹ್ನ 3 ಗಂಟೆಗೆ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.

ಬಡಗುತಿಟ್ಟಿನ ಯಕ್ಷಗಾನ ಭರವಸೆಯ ಯುವ ಕಲಾವಿದ ಪ್ರದೀಪ ವಿ.ಸಾಮಗ ಇವರಿಗೆ ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ ಮಾಡಲಾಗುವುದು.ಸಾಲಿಗ್ರಾಮ ಮೇಳದ ಯಜಮಾನರಾದ ಕಿಶನ್ ಹೆಗ್ಡೆ ಅಭಿನಂದನಾ ಭಾಷಣ ಮಾಡಲಿದ್ದಾರೆ. ಬಳಿಕ ಯಕ್ಷಗಾನ ತಾಳಮದ್ದಲೆ ಕೃಷ್ಣಾರ್ಜುನ ಕಾಳಗ ನಡೆಯಲಿದೆ.

ತಾಳಮದ್ದಲೆಯಲ್ಲಿ ಭಾಗವತರು: ಕೇಶವ ಹೆಗಡೆ ಕೊಳಗಿ,ಮದ್ದಲೆ-ರಾಘವೇಂದ್ರ ಹೆಗಡೆ ಯಲ್ಲಾಪುರ,ಚಂಡೆ-ರಾಮಕೃಷ್ಣ ಮಂದರ್ತಿ, ಅರ್ಥಧಾರಿಗಳಾಗಿ ಜಬ್ಬಾರ್ ಸಮೋ ಸಂಪಾಜೆ, ರಾಧಾಕೃಷ್ಣ ಕಲ್ಚಾರ್, ಹೆಚ್.ಸುಜಯೀಂದ್ರ ಹಂದೆ, ಪ್ರದೀಪ್ ವಿ ಸಾಮಗ, ಶಿವಕುಮಾರ್ ಅಳಗೋಡು, ಶಶಾಂಕ್ ಪಟೇಲ್ ಕೆಳಮನೆ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!