spot_img
Thursday, April 30, 2026
spot_img

ಬಿಜೆಪಿ ಸಾಕಿದ ರಣಹದ್ದುಗಳು ಕೆಇಎ ಪರೀಕ್ಷೆಯಲ್ಲೂ ಕಾರ್ಯಾಚರಣೆ ನಡೆಸಿವೆ : ಕಾಂಗ್ರೆಸ್‌

ಜನಪ್ರತಿನಿಧಿ ವಾರ್ತೆ : ಬಿಜೆಪಿ ಸಾಕಿದ ರಣಹದ್ದುಗಳು ಈಗಲೂ ಕಾರ್ಯಾಚರಣೆ ನಡೆಸಿವೆ. ಆದರೆ ಅವುಗಳನ್ನು ನಮ್ಮ ಸರ್ಕಾರ ಹೆಡೆಮುರಿ ಕಟ್ಟಿದೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದೆ.

ಕೆಇಎ ಪರಿಕ್ಷೆಗಳಲ್ಲೂ ಅಕ್ರಮ ನಡೆದಿದೆ ಎಂಬ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್‌, PSI ಅಕ್ರಮ ನಡೆಸಿದ್ದವರೇ ಈಗ ಕೆಇಎ ಪರೀಕ್ಷೆಯ ಅಕ್ರಮದಲ್ಲೂ ಭಾಗಿಯಾಗಿದ್ದಾರೆ, ನಮ್ಮ ಸರ್ಕಾರ ತಕ್ಷಣಕ್ಕೆ ಅಕ್ರಮವನ್ನು ಬಯಲಿಗೆಳೆದು ಸ್ಪಷ್ಟ ಸಂದೇಶ ನೀಡಿದೆ ಎಂದಿದೆ.

ಬಿಜೆಪಿ ಸರ್ಕಾರವಾಗಿದ್ದಿದ್ದರೆ, ಅಕ್ರಮ ನಡೆದೇ ಇಲ್ಲ ಎಂದು ಸಮರ್ಥಿಸುತ್ತಿತ್ತು, ಆರೋಪಿಗಳ ಜೊತೆಗೆ ಬಿಜೆಪಿಗರೂ ಕೈಜೋಡಿಸಿರುತ್ತಿದ್ದರು, ಹಗರಣ ಹೊರಬಂದಮೇಲೆ ಆರೋಪಿಗಳನ್ನು ಬಂಧಿಸಲು ಮೀನಮೇಷ ಎಣಿಸುತ್ತಿತ್ತು. ನಮ್ಮ ಸರ್ಕಾರ ಯಾವುದೇ ಅಕ್ರಮಗಳನ್ನು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ತನ್ನನ್ನು ತಾನು ಸಮರ್ಥಿಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!