Sunday, September 8, 2024

ವಕ್ವಾಡಿ : ಉಚಿತ ನೇತ್ರ ತಪಾಸಣಾ ಶಿಬಿರ

ಜನಪ್ರತಿನಿಧಿ ವಾರ್ತೆ (ವಕ್ವಾಡಿ) : ಕರ್ನಾಟಕ ಸರಕಾರ , ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ,ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗಿ ಮತ್ತು  ಉಪಕೇಂದ್ರ ವಕ್ವಾಡಿ, ಗ್ರಾಮ ಪಂಚಾಯತ್ ಕಾಳಾವರ,  ಯುವಶಕ್ತಿ ಮಿತ್ರ ಮಂಡಳಿ(ರಿ.) ಹೆಗ್ಗಾರ್ಬೈಲ್ ವಕ್ವಾಡಿ ಹಾಗೂ ಕೆ.ಎಂ.ಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಇಂದು(ಮಂಗಳವಾರ, ಅ.31)  ಬೆಳಿಗ್ಗೆ 10 ಗಂಟೆಯಿಂದ  ಮಧ್ಯಾಹ್ನ 1 ಗಂಟೆಯ ತನಕ ಸಾರ್ವಜನಿಕ ಸಮುದಾಯ ಭವನ ವಕ್ವಾಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಳವರ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ್ ಶೆಟ್ಟಿಗಾರ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗಿ ಇದರ ಆಡಳಿತ ವೈದ್ಯಾಧಿಕಾರಿ ಡಾ. ಪ್ರತಾಪ್,ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸತ್ಯರಂಜನ್ ಹೆಗ್ಡೆ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ರಾಮಚಂದ್ರ ನಾವುಡ, ಸದಸ್ಯರಾದ ರಮೇಶ್ ಶೆಟ್ಟಿ ವಕ್ವಾಡಿ, ಯುವಶಕ್ತಿ ಮಿತ್ರ ಮಂಡಲ(ರಿ) ಹೆಗ್ಗಾರ್ಬೈಲು ವಕ್ವಾಡಿಯ ಅಧ್ಯಕ್ಷ ವಿಜಯ್ ಪೂಜಾರಿ, ಕೆ. ಎಂ.ಸಿ ಮಣಿಪಾಲ ವೈದ್ಯಾಧಿಕಾರಿ ಅಂಜನಾ ಹಾಗೂ ತಂಡ, ಆರೋಗ್ಯ ಇಲಾಖೆಯ ಆರೋಗ್ಯ ಸುರಕ್ಷಾಧಿಕಾರಿಗಳಾದ ದೀಪಾ, ಪ್ರಶಾಂತ್, ಸಮುದಾಯ ಆರೋಗ್ಯಾಧಿಕಾರಿ ಪ್ರಿಯಾ ಡಿಸೋಜ, ಆಶಾ ಕಾರ್ಯಕರ್ತೆಯರಾದ ಶ್ಯಾಮಲ, ಶೋಭಾ, ಯಶೋಧ, ಮಲ್ಲಿಕಾ, ಶೈಲ, ಯುವಶಕ್ತಿಯ ಮಾಜಿ ಅಧ್ಯಕ್ಷ ಉಮೇಶ್ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ರಾಕೇಶ್ ಶೆಟ್ಟಿ ವಕ್ವಾಡಿ ನಿರೂಪಿಸಿ ವಂದಿಸಿದರು.

ವಕ್ವಾಡಿಯ 100ಕ್ಕೂ ಹೆಚ್ಚು ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಂಡರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!