spot_img
Wednesday, January 22, 2025
spot_img

ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅಸ್ತಂಗತ

ಜನಪ್ರತಿನಿಧಿ ವಾರ್ತೆ (ಮೂಡಬಿದಿರೆ) : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ  ಡಾ. ಎಂ. ಮೋಹನ್ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ(106) ಇಂದು(ಅ.31, ಮಂಗಳವಾರ) ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪಡೆಯುತ್ತಿದ್ದರು.ಆದರೇ, ಚಿಕಿತ್ಸೆ ಫಲಕಾರಿಯಾಗದೇ  ಅವರು  ಮೃತರಾಗಿದ್ದಾರೆ.

ಮೃತರು ಡಾ. ಮೋಹನ್ ಆಳ್ವ ಸಹಿತ ಮೂವರು ಪುತ್ರರು ಮತ್ತು ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲರಾಗಿ ಗುರುತಿಸಿಕೊಂಡಿದ್ದರು. ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ನಡೆಯುತ್ತಿದ್ದ ಪ್ರಮುಖ ಕಾರ್ಯಕ್ರಮಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳುತ್ತಿದ್ದರು. ಕೃಷಿಕರಾಗಿದ್ದ ಆನಂದ ಆಳ್ವ, ಕಂಬಳ, ಶಿಕ್ಷಣ, ಧಾರ್ಮಿಕ ಕ್ಷೇತ್ರಗಳಿಗೆ ಗುರುತರವಾದ ಕೊಡುಗೆಯನ್ನು ನೀಡಿದ್ದಾರೆ. ಎಡಪದವು ವಿವೇಕಾನಂದ ಶಾಲೆಯ ಸ್ಥಾಪಕ ಪ್ರಮುಖರಲ್ಲಿ ಓರ್ವರಾಗಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!