spot_img
Wednesday, April 29, 2026
spot_img

ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ : ಮೋದಿ ಶುಭಾಶಯ

ಜನಪ್ರತಿನಿಧಿ ವಾರ್ತೆ :  ಕನ್ನಡ ರಾಜ್ಯೋತ್ಸವದ ಶುಭದಿನದಂದು ಪ್ರಧಾನಿ ನರೇಂದ್ರ ಮೋದಿ ಸಮಸ್ತ ಕನ್ನಡನಾಡಿನ ಜನರಿಗೆ ಶುಭಾಶಯ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ʼಎಕ್ಸ್‌ʼ ಜಾಲತಾಣದ ಅಧಿಕೃತ ಖಾತೆಯ ಮೂಲಕ ಶುಭ ಹಾರೈಸಿದ ಅವರು, ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಹಾಡಿ ಹೊಗಳಿದ್ದಾರೆ.

ಇನ್ನು, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶ ಕೋರಿದ್ದಾರೆ, ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. 1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ ೫೦ ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ ಎಂದು ಶುಭಾಶಯ ತಿಳಿಸಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಕೂಡ ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸಿದ್ದಾರೆ. ತಮ್ಮ ಅಧಿಕೃತ ಮೈಕ್ರೋ ಬ್ಲಾಗಿಂಗ್‌ ವೇದಿಕೆಯಾದ ʼಎಕ್ಸ್‌ʼ ನಲ್ಲಿ, ರಾಜ್ಯೋತ್ಸವ ಆಚರಿಸಿಕೊಳ್ಳುತ್ತಿರುವ ಕರ್ನಾಟಕ, ಮಧ್ಯಪ್ರದೇಶ, ಕೇರಳ, ಛತ್ತೀಸಗಢ, ಹರಿಯಾಣ, ಪಂಜಾಬ್‌, ಆಂಧ್ರಪ್ರದೇಶ, ಲಕ್ಷದ್ವೀಪ, ಪುದುಚೇರಿ ರಾಜ್ಯಗಳ ಶುಭಾಶಯ ಕೋರಿದ್ದಲ್ಲದೇ, ಇಂಡಿಯಾದ ಸಾಮರ್ಥ್ಯವೇ ಭಾರತ್.‌ ಪ್ರತಿಯೊಂದು ರಾಜ್ಯಗಳು ತನ್ನ ಶ್ರೀಮಂತ ಇತಿಹಾಸ ಹಾಗೂ ವೈವಿಧ್ಯಮಯ ಸಂಸ್ಕೃತಿ ಮತ್ತು ಪರಂಪರೆಯಿಂದಲೇ ದೇಶ ಬೆಳಗುತ್ತಿದೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!