Sunday, September 8, 2024

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌, ನೀರು ನೀಡಲು ತೀರ್ಮಾನ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ : 68ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ ಹಾಗೂ ಕುಡಿಯುವ ನೀರು ನೀಡುವುದಾಗಿ ಘೋಷಿಸಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಆಯೋಜಿಸಿದ ೬೮ನೇ ರಾಜ್ಯೋತ್ಸವ ಕಾರ್ಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಅವರು ಘೋಷಿಸಿದ್ದಾರೆ.

ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಘೋಷವಾಕ್ಯದಡಿಯಲ್ಲಿ ಇಡೀ ವರ್ಷ ಸ್ವಾಭಿಮಾನಿ ಕನ್ನಡ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಹಿಂದಿನ ಬಿಜೆಪಿ ಸರ್ಕಾರವೇ 50ನೇ ವರ್ಷಾಚರಣೆಯನ್ನು ಮಾಡಬೇಕಿತ್ತು. ಅವರು ಆಚರಿಸಿಲ್ಲ. ಹಾಗಾಗಿ ನಾವು ಆಚರಣೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಶಿಕ್ಷಣ ಗುಣಮಟ್ಟ ಹೆಚ್ಚಿಸುವ ದೃಷ್ಟಿಯಿಂದ ಹಾಗೂ ಕನ್ನಡ ಮಾಧ್ಯಮ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ನಮ್ಮ ಸರ್ಕಾರ ಕನ್ನಡ ಶಾಲೆ ಉಳಿಸುವುದೇ ನಮ್ಮ ಬದ್ಧತೆ. ಆರ್ಥಿಕ ಸುಧಾರಣೆ, ಸಾಮಾಜಿಕ ಸುವ್ಯವಸ್ಥೆಯ ಜೊತೆಗೆ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ನಮ್ಮ ಸರ್ಕಾರ ನಿರಂತರ ಕಾರ್ಯ ನಿರ್ವಹಿಸಲಿದೆ ಎಂದರು.

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೆ ಮಾಡಲು ಕೇಂದ್ರಕ್ಕೆ ಒತ್ತಾಯ

ಕೇಂದ್ರ ಸರ್ಕಾರದ ಎಲ್ಲಾ ಉದ್ಯೋಗಗಳಿಗೆ ಇಂಗ್ಲೀಷ್‌ ಹಾಗೂ ಹಿಂದಿ ಭಾಷೆಗಳಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದ ಹಲವು ಅಭ್ಯರ್ಥಿಗಳಿಳಿಗೆ ಇದರಿಂದಾಗಿ ಕೇಂದ್ರದ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಪರೀಕ್ಷೆಗಳನ್ನು ಕನ್ನಡದಲ್ಲೇ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರದ ಮೂಲಕ ಒತ್ತಾಯಿಸುತ್ತೇನೆ ಎಂದು ಹೇಳಿದರು.

ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತವರೇ ಉನ್ನತ ಮಟ್ಟದಲ್ಲಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ ಎಂಬುವುದು ತಪ್ಪು ಕಲ್ಪನೆ. ಸುಪ್ರೀಂ ಕೋರ್ಟ್‌ ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಹೇಳಿದೆ. ಆದರೇ, ಮಾತೃಭಾಷೆಯಲ್ಲಿ ಕಲಿಸುವುದು ಉತ್ತಮ ಎಂದು ಅವರು ಅಭಿಪ್ರಾಯ ಪಟ್ಟರು.

ಆಡಳಿತದಲ್ಲಿ ಕನ್ನಡ ಕಡ್ಡಾಯ

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ದೇವರಾಜ ಅರಸು ಅವರು ನಾಮಕರಣ ಮಾಡಿ ೫೦ ವರ್ಷಗಳು ಸಂದಿವೆ. ನಮ್ಮ ನಾಡಿನಲ್ಲಿ ವ್ಯವಹರಿಸುವಾಗ ಆಡಳಿತದಲ್ಲಿ ಕನ್ನಡ ಭಾಷೆ ಬಳಕೆಯಾಗಬೇಕು. ಕನ್ನಡವನ್ನು ಪ್ರತಿಯೊಬ್ಬ ಅಧಿಕಾರಿಯೂ, ಜನಪ್ರತಿನಿಧಿಗಳು ಕಡ್ಡಾಯವಾಗಿ ಬಳಸಬೇಕು ಎಂದು ಅವರು ಹೇಳಿದ್ದಾರೆ

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!