spot_img
Tuesday, April 28, 2026
spot_img

ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ ೬೮ ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು.

ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾಗವಹಿಸಿದ ಸ್ಥಬ್ದಚಿತ್ರಗಳಲ್ಲಿ ಕರ್ನಾಟಕ ರಾಜ್ಯದ ಅರಣ್ಯ ಇಲಾಖೆ ಪ್ರಥಮ ಸ್ಥಾನ, ಕೃಷಿ ಇಲಾಖೆ ದ್ವಿತೀಯ ಸ್ಥಾನ ಪಡೆದಿದೆ. ಮೆರವಣಿಗೆಯಲ್ಲಿ ಭಾಗವಹಿಸಿದ ಕಾಲೇಜು ವಿದ್ಯಾರ್ಥಿಗಳ ತಂಡದಲ್ಲಿ ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ, ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆ ಎರಡನೇ ಸ್ಥಾನ ಮತ್ತು ಉಡುಪಿಯ ಸರಕಾರಿ ಪ್ರೌಢಶಾಲೆ (ಬೋರ್ಡ್ ಹೈಸ್ಕೂಲ್) ತೃತೀಯ ಸ್ಥಾನ ಪಡೆದಿದೆ.

ಪಥ ಸಂಚಲನದಲ್ಲಿ ವಿವಿಧ ಇಲಾಖೆಯ ಹಾಗೂ ಶಾಲಾ-ಕಾಲೇಜುಗಳ 14 ತುಕಡಿಗಳು ಭಾಗವಹಿಸಿದ್ದು, ಕಾಲೇಜು ವಿಭಾಗದ ಎನ್.ಸಿ.ಸಿ ನೋವೆಲ್ ವಿಭಾಗದ ಪೂರ್ಣಪ್ರಜ್ಞ ಕಾಲೇಜು ಮೊದಲನೇ ಸ್ಥಾನ, ಎನ್.ಸಿ.ಸಿ ನೋವೆಲ್ ವಿಭಾಗದ ಎಂ.ಜಿಂ.ಎಂ ಕಾಲೇಜು ಎರಡನೇ ಸ್ಥಾನ, ಎನ್.ಸಿ.ಸಿ ಆರ್ಮಿ ವಿಭಾಗದ ಪೂರ್ಣಪ್ರಜ್ಞ ಕಾಲೇಜು ಮೂರನೇ ಸ್ಥಾನ ಪಡೆದಿದೆ. ಪ್ರಾಥಮಿಕ ಹೈಸ್ಕೂಲ್ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಂತೆಕಟ್ಟೆ ಕಳತ್ತೂರು ಪ್ರಥಮ ಸ್ಥಾನ, ಸರಕಾರಿ ಪ್ರೌಢಶಾಲೆ ಆವರ್ಸೆ ಎರಡನೇ ಸ್ಥಾನ, ಸೈಂಟ್ ಸಿಸಿಲೀಸ್ ಪ್ರೌಢಶಾಲೆ ಉಡುಪಿ ಮೂರನೇ ಸ್ಥಾನ ಪಡೆದಿದೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಒಳಕಾಡು ಮೊದಲನೇ ಸ್ಥಾನ, ನಾರಾಯಣ ಗುರು ಆಂಗ್ಲಮಾಧ್ಯಮ ಶಾಲೆ ಎರಡನೇ ಸ್ಥಾನ ತಮ್ಮದಾಗಿಸಿಕೊಂಡಿದೆ.

ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ೨೯ ಮಂದಿಗೆ ಹಾಗೂ ೫ ಸಂಘ-ಸಂಸ್ಥೆಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಭುವನೇಶ್ವರಿ ದೇವಿಯ ಮೆರವಣಿಗೆಗೆ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಚಾಲನೆ ನೀಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!