Sunday, September 8, 2024

ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

ಕುಂದಾಪುರ: ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಪರಂಪರೆ ಹಿರಿದಾದುದ್ದು. ಹಳೆಗನ್ನಡ, ನಡುಗನ್ನಡ, ಹೊಸಗನ್ನಡ ಕಾಲಘಟ್ಟದ ಸಾಹಿತ್ಯದ ಸೃಜನಶೀಲ ಓದು ಕರ್ನಾಟಕದ ಭವ್ಯತೆಯನ್ನು ಪರಿಚಯಿಸುತ್ತದೆ ಎಂದು ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ಇದರ ಅಧ್ಯಕ್ಷರಾದ ಡಾ. ಸದಾನಂದ ಬೈಂದೂರು ಹೇಳಿದರು.

ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿ, ೬೮ನೇ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಕನ್ನಡ ಸಂಘದ ಸಂಯೋಜಕರಾದ ಶ್ರೀಮತಿ ರೇಷ್ಮಾ ಶೆಟ್ಟಿ, ವಿನಯಾ ವಿ. ಶೆಟ್ಟಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಶ್ರೇಯಾ ಖಾರ್ವಿ ಪ್ರಾರ್ಥಿಸಿ, ದೃಷಿತಾ ಅತಿಥಿಗಳನ್ನು ಪರಿಚಯಿಸಿ, ಕೀರ್ತಿ ಕೆ. ಶೆಟ್ಟಿ ಬಹುಮಾನ ವಿಜೇತರ ಪಟ್ಟಿ ವಾಚಿಸಿ, ಸುಪ್ರಿಯಾ ಸಿ. ಶೆಟ್ಟಿ ವಂದಿಸಿ, ಸವಿನಾ ಕಾರ್ಯಕ್ರಮ ನಿರ್ವಹಿಸಿದರು.

ಕರ್ನಾಟಕ ಎಂಬ ಹೆಸರಾಗಿ ’೫೦’ ವರ್ಷವಾದ ಸಂಭ್ರಮದ ಹಿನ್ನಲೆಯಲ್ಲಿ ಆಯೋಜಿಸಿದ ಲಾಂಛನ ಸ್ಪರ್ಧೆಯ ವಿಜೇತರಿಗೆ ಹಾಗೂ ಕನ್ನಡ ದೇಶಭಕ್ತಿಗೀತೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!