Sunday, September 8, 2024

ಕೋಡಿ ಬ್ಯಾರೀಸ್ ನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಕೋಡಿ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸ್ಯೆಯದ್ ಮೊಹಮ್ಮದ್ ಬ್ಯಾರಿಯವರು ಕನ್ನಡ ನಾಡು ನುಡಿ
ಅಭಿಮಾನದೊಂದಿಗೆ ರಾಜ್ಯೋತ್ಸವಕ್ಕೆ ಶುಭ ಹಾರೈಸಿದರು.

ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಇವರು ವಹಿಸಿಕೊಂಡು ” ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನದ ಸಂಭ್ರಮವಾಗಿರದೆ ಕನ್ನಡಿಗರ ಬದುಕಿನ ನಿತ್ಯೋತ್ಸವವಾಗಲಿ ” ಎಂದು ನುಡಿದರು.

ಸಮಾರಂಭದಲ್ಲಿ ಬ್ಯಾರೀಸ್ ವಿಶ್ವಸ್ಥ ಮಂಡಳಿ ಸದಸ್ಯರಾದ ಡಾ. ಆಸೀಫ್ ಬ್ಯಾರಿ, ಸಂಯೋಜಕರಾದ ಆಕಾಶ್ ಎಸ್, ಚಕ್ರೇಶ್ವರಿ ದೇವಳದ ಧರ್ಮದರ್ಶಿಗಳಾದ ಗೋಪಾಲ ಪೂಜಾರಿ, ನಾಗರಾಜ್ ಕಾಂಚನ್, ಕುಂದಾಪುರ
ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ರಫೀಕ್ ಬಿ.ಎಸ್. ಎಫ್, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಅಂಗ
ಸಂಸ್ಥೆಗಳ ಮುಖ್ಯಸ್ಥರು ಶಾಲಾಭಿವೃದ್ಧಿ ಹಾಗೂ ಸಲಹಾ ಮಂಡಳಿ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಾಜಿ ಕೆ ಮೊಹಿದ್ದೀನ್ ಬ್ಯಾರಿ ಸ್ಮಾರಕ ಕನ್ನಡ ಅನುದಾನಿತ ಪ್ರೌಢ ಶಾಲೆಯ ಮುಖ್ಯಶಿಕ್ಷಕರಾದ
ಜಯಶೀಲ ಶೆಟ್ಟಿ ವಂದಿಸಿ, ಕನ್ನಡ ಉಪನ್ಯಾಸಕರಾದ ಡಾ. ಸಂದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ
ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!