spot_img
Tuesday, April 28, 2026
spot_img

ನ.6ರಂದು ಛಾಯಾಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ ಕುಂದಾಪುರ: ಸ್ಥಳಾಂತರ ಶಾಖೆ ಉದ್ಘಾಟನೆ

ಕುಂದಾಪುರ: ಛಾಯಾಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ ಕುಂದಾಪುರ ಇದರ ಸ್ಥಳಾಂತರ ಶಾಖೆ ಉದ್ಘಾಟನೆ ನ.6 ಸೋಮವಾರ ಪೂರ್ವಾಹ್ನ 10ಗಂಟೆಗೆ ಕುಂದಾಪುರ ಮುಖ್ಯರಸ್ತೆಯ ಗೀತಾಂಜಲಿ ಟಾಕೀಸಿನ ಎದುರುಗಡೆ ಇರುವ ವಿ.ಎಂ.ಕೆ ಟವರ್‌ನಲ್ಲಿ ನಡೆಯಲಿದೆ.

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಕೆ.ಜಯಪ್ರಕಾಶ ಹೆಗ್ಡೆ ಉದ್ಘಾಟನೆ ನೆರವೇರಿಸಿದ್ದಾರೆ. ಛಾಯಾಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ ನಿ., ಕುಂದಾಪುರ ಇದರ ಅಧ್ಯಕ್ಷರಾದ ಗಿರೀಶ್ ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಗಣಕಯಂತ್ರವನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಸಹಕಾರ ರತ್ನ ಬಿ.ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕುಂದಾಪುರ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ., ಎಸ್.ಕೆ.ಪಿ.ಎ ದ.ಕ-ಉಡುಪಿ ಅಧ್ಯಕ್ಷರಾದ ಪದ್ಮಪ್ರಸಾದ್ ಜೈನ್, ಸೌತ್ ಕೆನರಾ ಫೋಟೋಗ್ರಾಫರ್‍ಸ್ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಅಧ್ಯಕ್ಷರಾದ ಕೆ.ವಾಸುದೇವ ರಾವ್, ಎಸ್.ಕೆ.ಪಿ.ಎ ಕುಂದಾಪುರ ಬೈಂದೂರು ವಲಯ ಅಧ್ಯಕ್ಷರಾದ ದಿವಾಕರ ಶೆಟ್ಟಿ, ವಿ.ಎಂ.ಕೆ ಟವರ್‍ಸ್ ಕಟ್ಟಡ ಮಾಲಕರಾದ ಕೆ.ರಮೇಶ ಕಾಮತ್, ಸೌತ್ ಕೆನರಾ ಫೋಟೋಗ್ರಾಫರ್‍ಸ್ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ನಿರ್ದೇಶಕರಾದ ಗಣೇಶ್ ಕೆ., ಎಸ್.ಕೆ.ಪಿ.ಎ ಕುಂದಾಪುರ ಬೈಂದೂರು ವಲಯ ಪ್ರಧಾನ ಕಾರ್ಯದರ್ಶಿ ದಿನೇಶ ರಾಯಪ್ಪನಮಠ ಭಾಗವಹಿಸಲಿದ್ದಾರೆ ಸಂಘದ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!