spot_img
Tuesday, April 28, 2026
spot_img

ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಕನ್ನಡ ದೇಶಭಕ್ತಿ ಗೀತೆಗಳ ಸಮೂಹ ಗಾಯನ ಸ್ಪರ್ಧೆ

ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಶೀರ್ಷಿಕೆಯಡಿಯಲ್ಲಿ ಕನ್ನಡ ದೇಶಭಕ್ತಿ ಗೀತೆಗಳ ಸಮೂಹ ಗಾಯನ ಸ್ಪರ್ಧೆ ನಡೆಯಿತು.

ಈ ಸಂಧರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್, ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ತೀರ್ಪುಗಾರರಾಗಿದ್ದು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕನ್ನಡ ಸಂಘದ ಸಂಯೋಜಕರಾದ ರೇಷ್ಮ್ಮಾ ಶೆಟ್ಟಿ ಮತ್ತು ವಿನಯಾ ಶೆಟ್ಟಿ ಕಾರ್ಯಕ್ರಮವನ್ನು ಸಂಯೋಜಿಸಿದರು. ಸುಮಾರು 15 ತಂಡಗಳು ಭಾಗವಹಿಸಿದ್ದು, ತೃತೀಯ ಬಿ.ಕಾಂ. (ಬಿ) ತರಗತಿಯ ರಶ್ಮಿ ಮತ್ತು ತಂಡ ಪ್ರಥಮ ಸ್ಥಾನ, ದ್ವಿತೀಯ ಬಿ.ಬಿ.ಎ. ತರಗತಿಯ ಸುಹಾನಿ ಮತ್ತು ತಂಡ ದ್ವಿತೀಯ ಸ್ಥಾನ ಹಾಗೂ ತೃತೀಯ ಬಿ.ಎಸ್ಸಿ. ತರಗತಿಯ ಲಕ್ಷ್ಮಿಕಾಂತ್ ಮತ್ತು ತಂಡ ತೃತೀಯ ಸ್ಥಾನ ಪಡೆದುಕೊಂಡಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!