spot_img
Wednesday, January 22, 2025
spot_img

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಎಸ್.ಪಿ ಭೇಟಿ

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ನಿಯೋಗ ಶನಿವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಇದೇ ತಿಂಗಳು ಕುಂದಾಪುರ ಕ್ಷೇತ್ರ ಶಿಕ್ಷಣ ವಲಯದ ೨೭ ಕನ್ನಡ ಶಾಲೆಗಳ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ‘ನಾ ಕಂಡಂತೆ ಪೊಲೀಸ್’ ಎಂಬ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.

ಪೊಲೀಸರೆಂದರೆ ಭಯವಲ್ಲ, ಭರವಸೆ ಎಂಬ ಉದ್ದೇಶದಡಿ ವಿದ್ಯಾರ್ಥಿಗಳಲ್ಲಿ ಪೊಲೀಸರ ಬಗೆಗಿನ ಸದಾಭಿಪ್ರಾಯವನ್ನು ಅಕ್ಷರ ರೂಪದಲ್ಲಿ ಸಂಗ್ರಹಿಸುವ ಮೂಲಕ ಅವರ ಬರವಣಿಗೆ ಹಾಗೂ ಕನ್ನಡಾಭಿಮಾನ ಪ್ರದರ್ಶಿಸಲು ಸಂಘ ಈ ಕಾರ್ಯಕ್ರಮ ಆಯೋಜಿಸಿದೆ ಎಂದು ಉದ್ದೇಶದ ಬಗ್ಗೆ ಎಸ್ಪಿ ಅವರ ಗಮನಕ್ಕೆ ತರಲಾಯಿತು.

ಕಾರ್ಯಕ್ರಮದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಸ್ಪಿ ಅವರು, ಪೊಲೀಸರ ಬಗ್ಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅರಿಯುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಇದೊಂದು ಉತ್ತಮ ಪ್ರಯತ್ನ. ಇದೊಂದು ಉತ್ತಮ ಕಾರ್ಯಕ್ರಮ. ಇಲಾಖೆ ನಿಮ್ಮೊಂದಿಗೆ ಕೈಜೋಡಿಸುತ್ತದೆ ಎಂದರು.

ಈ ಸಂದರ್ಭ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ, ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ, ಕೋಶಾಧಿಕಾರಿ ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಜೊತೆ ಕಾರ್ಯದರ್ಶಿಗಳಾದ ರಾಘವೇಂದ್ರ ಬಳ್ಕೂರು, ಯೋಗೀಶ್ ಕುಂಭಾಸಿ, ಕಾರ್ಯಕಾರಿ ಸಮಿತಿ ಸದಸ್ಯ ಶ್ರೀಕಾಂತ್ ಹೆಮ್ಮಾಡಿ, ಪತ್ರಕರ್ತ ಸಿಲ್ವೆಸ್ಟರ್ ಡಿಸೋಜಾ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!