Sunday, September 8, 2024

ಡಿ.14 ರಿಂದ ನಾಲ್ಕು ದಿನ ʼಆಳ್ವಾಸ್‌ ವಿರಾಸತ್‌ 2023ʼ ಸಾಂಸ್ಕೃತಿಕ ಉತ್ಸವ : ಡಾ. ಎಂ. ಮೋಹನ್‌ ಆಳ್ವ  

ಜನಪ್ರತಿನಿಧಿ ವಾರ್ತೆ : ಆಳ್ವಾಸ್‌ ಶಿಕ್ಷಣ ಪ್ರತಿಷ್ಟಾನ ಪ್ರತಿವರ್ಷ ನಡಸುವ ವೈಭವದ ಸಾಂಸ್ಕೃತಿಕ ಉತ್ಸವ ʼಆಳ್ವಾಸ್‌ ವಿರಾಸತ್‌ 2023ʼ ಇದೇ ಬರುವ ಡಿಸೆಂಬರ್‌ 14,15, 16 ಮತ್ತು 17ನೇ ತಾರೀಕಿನಂದು ನಾಲ್ಕು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ ಎಂದು ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ ಮೋಹನ್‌ ಆಳ್ವ ತಿಳಿಸಿದ್ದಾರೆ.

29ನೇ ವರ್ಷದ ಆಳ್ವಾಸ್‌ ವಿರಾಸತ್‌ ಕಾರ್ಯಕ್ರಮವನ್ನೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಸಾಂಸ್ಕೃತಿಕವಾಗಿ ರಸದೌತಣ ನೀಡುವುದಕ್ಕಾಗಿ ಯೋಜನೆ ರೂಪಿಸಿಕೊಳ್ಳಲಾಗಿದೆ. ಈಗಾಗಲೇ ಕಾರ್ಯಕ್ರಮದ ರೂಪುರೇಷೆಯು ಸಿದ್ಧತೆಯಲ್ಲಿದ್ದು, ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸುವುದಕ್ಕಾಗಿ ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.  

ಪ್ರತಿದಿನ ಸಂಜೆ 6 ಗಂಟೆಗೆ ಪ್ರಾರಂಭವಾಗುವ ಸಾಂಸ್ಕೃತಿಕ ಸಂಜೆ ರಾತ್ರಿ 9:30 ಗಂಟೆಗೆ ಮುಕ್ತಾಯಗೊಳ್ಳಲಿದೆ. ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ವಿರಾಸತ್ ಕಾರ್ಯಕ್ರಮಗಳು ನಡೆಯಲಿದೆ.  

ಡಿಸೆಂಬರ್ 14 ಗುರುವಾರ ದಂದು ಪ್ರಾರಂಭವಾಗಿ 17 ನೇ ತಾರೀಕಿನಂದು ನಡೆಯುವ ಸಾಂಸ್ಕೃತಿಕ ಉತ್ಸವದಲ್ಲಿ ಸುಮಾರು 50 ಸಾವಿರಕ್ಕಿಂತ ಹೆಚ್ಚಿನ ವೀಕ್ಷಕರು ಕಣ್ತುಂಬಿಕೊಳ್ಳಲು ಅನುಕೂಲವಾಗುವಂತೆ ಆಸನದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ನಿರಂತರ ನಾಲ್ಕು ದಿನಗಳ ಕಾಲ ನಡೆಯುವ ರಾಷ್ಟೀಯ ಸಾಂಸ್ಕೃತಿಕ ಉತ್ಸವ ʼಆಳ್ವಾಸ್ ವಿರಾಸತ್ 2023ʼಕ್ಕೆ ಸಂಸ್ಕೃತಿ ಪ್ರಿಯರೂ, ಕಲಾ ಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವದ ಯಶಸ್ಸಿಗೆ ಸಹಕರಿಸಬೇಕೆಂದು ಮೋಹನ್‌ ಆಳ್ವ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!