spot_img
Tuesday, April 28, 2026
spot_img

ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ: ಖೇಲೋ ಜನತಾ 2023

ಕುಂದಾಪುರ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಖೇಲೋ ಜನತಾ ವಾರ್ಷಿಕ ಕ್ರೀಡಾಕೂಟ-2023 ನ್ನು‌ಆಯೋಜಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾಗಿರುವ ಗಣೇಶ್ ಮೊಗವೀರರವರು ವಹಿಸಿ ಪ್ರಾಸ್ತಾವಿಕದೊಂದಿಗೆ ಕಾಲೇಜಿನ ಕ್ರೀಡಾ ಚಟುವಟಿಕೆಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿರುವ ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಮಂಜುನಾಥ್ ಶೆಟ್ಟಿಯವರು ಗೌರವ ರಕ್ಷೆಯನ್ನು ಸ್ವೀಕರಿಸಿ ಹಾಗೂ ಕ್ರೀಡಾಜ್ಯೋತಿಯನ್ನು ಬೆಳಗಿಸಿ ವಿದ್ಯಾರ್ಥಿ ಪ್ರತಿಭೆಗಳಿಗೆ ಕ್ರೀಡಾಕೂಟಗಳು ಅದ್ಭುತವಾದ ವೇದಿಕೆಯಾಗಿದೆ ಜನತಾ ಪದವಿಪೂರ್ವ ಕಾಲೇಜಿನ ಕ್ರೀಡಾ ಸಾಧನೆಯನ್ನು ಕೊಂಡಾಡಿ ಶುಭ ಹಾರೈಸಿದರು.

ಪ್ರಗತಿ ಮಹಿಳಾ ವಿವಿಧೋದ್ದೇಶ ಕೋ-ಆಪರೇಟಿವ್ ಸೊಸೈಟಿ(ರಿ) ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ಧ್ವಜಾರೋಹಣವನ್ನು ನೆರವೇರಿಸಿ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡೆಗಳ ಪಾತ್ರ ಮಹತ್ತರವಾದದ್ದು ಎಂದು ಶುಭ ಕೋರಿದರು.

ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಪ್ರಾಂಶುಪಾಲರಾಗಿರುವ ರಮೇಶ್ ಪೂಜಾರಿ, ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕ ಉದಯ್ ನಾಯ್ಕ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ಉಮೇಶ್ ನಾಯ್ಕ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!