spot_img
Sunday, June 21, 2026
spot_img

ಬ್ರಹ್ಮಾವರ: ಶಿಕ್ಷಕಿ ಗೀತಾ ಶೆಟ್ಟಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಬ್ರಹ್ಮಾವರ: ಕರ್ನಾಟಕ ಓಪನ್ ನ್ಯಾಷನಲ್ ಮಾಸ್ಟರ್ ಗೇಮ್ಸ್ ವತಿಯಿಂದ ನವಂಬರ್ 4 ಮತ್ತು 5 ರಂದು ಧಾರವಾಡದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಬ್ರಹ್ಮಾವರದ ಶಿಕ್ಷಕಿ ಶ್ರೀಮತಿ ಗೀತಾ ಎ. ಶೆಟ್ಟಿ ಅವರು 60 ಮೀಟರ್ ಓಟದಲ್ಲಿ ಮತ್ತು 100 ಮೀಟರ್ ಓಟದಲ್ಲಿ ಚಿನ್ನದ ಪದಕ ವಿಜೇತರಾಗಿ ಅಮೆರಿಕಾದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯದಿಂದ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ಇವರು ಸರಕಾರಿ ಪ್ರೌಢಶಾಲೆ ವಡ್ಡಸೆಯಲ್ಲಿ ಕನ್ನಡ ಭಾಷಾ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಈಗಾಗಲೇ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕ್ರೀಡಾಕೂಟದಲ್ಲಿ 10 ಬಾರಿ ರಾಜ್ಯಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತರಾಗಿರುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!