Sunday, September 8, 2024

ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ದೇಶದ ಜನರಿಗೆ ಸಂಭ್ರಮದ ಕ್ಷಣ : ಆರ್‌ಎಸ್‌ಎಸ್‌

ಜನಪ್ರತಿನಿಧಿ ವಾರ್ತೆ (ನವದೆಹಲಿ) : ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಮಂದಿರದ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರತಿಕ್ರಿಯಿಸಿದ್ದು, ಬರುವ ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ನಡೆಯುಲಿರುವ ಶ್ರೀರಾಮ ಮೂರ್ತಿ ಪ್ರತಿಷ್ಟಾಪನೆಯ ದಿನ ರಾಷ್ಟ್ರದ ಜನರ ಪಾಲಿಗೆ ಮಹತ್ವದ ದಿನ. ಮಾತ್ರವಲ್ಲದೇ ಸಂಭ್ರಮದ ಕ್ಷಣವಾಗಿರಲಿದೆ. ಅಷ್ಟಲ್ಲದೇ ಆ ದಿನವನ್ನು ಹಬ್ಬದಂತೆ ಆಚರಣೆ ಮಾಡಿ ಎಂದು ಆರ್‌ಎಸ್‌ಎಸ್‌ ರಾಷ್ಟ್ರದ ಜನರಿಗೆ ಕರೆ ಕೊಟ್ಟಿದೆ.

ರಾಮ ಮಂದಿರ ಉದ್ಘಾಟನೆ ಹಾಗೂ ಅದಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ನ ಜವಾಬ್ದಾರಿ ಬಗ್ಗೆ ಗುಜರಾತ್‌ನ ಕಛ್‌ ಜಿಲ್ಲೆಯ ಭುಜ್‌ನಲ್ಲಿ ನಡೆದ ಆರ್‌ಎಸ್‌ಎಸ್‌ ರಾಷ್ಟ್ರೀಯ ಕಾರ್ಯನಿರ್ವಾಹಕ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ, ದೇಶದ ಜನರಿಗೆ ಕರೆ ಕೊಟ್ಟಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಮೂರ್ತಿ ಪ್ರತಿಷ್ಠಾಪನೆ ಸಮಾರಂಭಕ್ಕೂ ಮುನ್ನ ಜನವರಿ 1 ರಿಂದ 15ರವರೆಗೆ ಮನೆ ಮನೆಗೆ ತೆರಳಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಆಹ್ವಾನ ಪತ್ರಿಕೆ ಹಂಚಲಿದ್ದಾರೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ನ ಪ್ರಚಾರ ಮುಖ್ಯಸ್ಥ ಸುನೀಲ್‌ ಅಂಬೇಕರ್‌ ಮಾತನಾಡಿ, ಶ್ರೀರಾಮ ಮಂದಿರದ ನಿರ್ಮಾಣ ಅಂತಿಮ ಹಂತದಲ್ಲಿದ್ದು, ಜನವರಿ 22ರಂದು ಮೂರ್ತಿಉ ಪ್ರತಿಷ್ಟಾಪನೆ ಕಾರ್ಯಕ್ರಮ ನಡೆಯಲಿದೆ. ಪರದೇಶಗಳಲ್ಲಿರುವ ಭಾರತೀಯರನ್ನೂ ಒಳಗೊಂಡು ದೇಶವಾಸಿಗಳುಗೆ ಇದು ಭಾರಿ ಸಂಭ್ರಮದ ಘಳಿಗೆ. ದಶಕಗಳ ನಿರಂತರ ಶ್ರಮದಿಂದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿದೆ. ದೇಶದಾದ್ಯಂತ ಜನರು ಈ ಸಂಭ್ರಮದಲ್ಲಿ ಭಾಗಿಯಾಹಲಿದ್ದಾರೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!