spot_img
Wednesday, January 22, 2025
spot_img

FamilyJanataPartyಯಲ್ಲಿ ನಿವೃತ್ತಿ ಪರ್ವ ಶುರುವಾದರೂ ಆಶ್ಚರ್ಯವಿಲ್ಲ! : ಬಿಜೆಪಿಯನ್ನು ತಿವಿದ ಕಾಂಗ್ರೆಸ್‌

ಜನಪ್ರತಿನಿಧಿ ವಾರ್ತೆ : ಬಿ ವೈ. ವಿಜಯೇಂದ್ರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಾಗಿನಿಂದ ಆಡಳಿತಾರೂಢ ಕಾಂಗ್ರೆಸ್‌, ಬಿಜೆಪಿಯನ್ನು ತಿವಿಯುವುದಕ್ಕೆ ಆರಂಭಿಸಿದೆ. ಈಗ ಮತ್ತೆ ತನ್ನ ಟೀಕಾವ್ಯಂಗ್ಯವನ್ನು ಮುಂದುವರಿಸಿದ್ದು, ಯಡಿಯೂರಪ್ಪನವರ ಮಗನ ರಾಜ್ಯಾಧ್ಯಕ್ಷ ಹುದ್ದೆ ಕೇವಲ ಲೋಕಸಭೆ ಚುನಾವಣೆವರೆಗೆ ಮಾತ್ರ ಎಂಬ ಗುಸುಗುಸು ಪಿಸುಪಿಸು ಜಗನ್ನಾಥ ಭವನದಲ್ಲಿ ಕೇಳಿ ಬರುತ್ತಿದೆಯಂತೆ ! ಎಂದು ವ್ಯಂಗ್ಯವಾಡಿದೆ.

ಸಾಮಾಜಿಕ ಜಾಲತಾಣ ʼಎಕ್ಸ್‌ʼ ಜಾಲತಾಣದ ತನ್ನ ಅಧಿಕೃತ ಖಾತೆಯ ಮೂಲಕ ಬಇಜೆಪಿ ನಾಯಕರನ್ನು ಟೀಕಿಸಿದ ಕಾಂಗ್ರೆಸ್‌, ಇದು ಸಿ.ಟಿ ರವಿ, ಬಸವನಗೌಡ ಪಾಟೀಲ್‌ ಯತ್ನಾಳ್‌, ಬಿ.ಎಲ್‌ ಸಂತೋಷ್ ಅವರುಗಳು ಸಮಾಧಾನ ಮಾಡಿಕೊಳ್ಳುತ್ತಿರುವುದೋ, ಅಥವಾ ನೈಜತೆ ಇದೆಯೋ ಕರ್ನಾಟಕ ಬಿಜೆಪಿ ಸ್ಪಷ್ಟಪಡಿಸಬೇಕು. ಎಂದು ಹೇಳಿದೆ.

ಇನ್ನು, ಸಿ.ಟಿ ರವಿ ಅವರೇ, ಈಗ ಯಡಿಯೂರಪ್ಪನವರ ಕಿಚನ್ ಕ್ಯಾಬಿನೆಟ್ ನಲ್ಲೇ ಎಲ್ಲವೂ ನಿರ್ಧಾರವಾಗಲಿದೆ, ಅವರ ಕಿಚನ್ ಕ್ಯಾಬಿನೆಟ್ ಗೆ ತಾವು ಹೋಗುವಿರಾ ಅಥವಾ ತಾವೂ ರಾಜಕೀಯ ನಿವೃತ್ತಿ ಪಡೆಯುವಿರಾ?

ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರೇ, ಇದೆಂತಹಾ ತಾವು ತಮ್ಮ ಅಸ್ತಿತ್ವಕ್ಕಾಗಿ ವಿಜಯೇಂದ್ರರ ಮುಂದೆ ಕೈಕಟ್ಟಿ ತಲೆಬಾಗಿಸಿ ನಿಲ್ಲುವಿರಾ ಅಥವಾ ರಾಜಕೀಯಕ್ಕೆ ಗುಡ್ ಬೈ ಹೇಳುವಿರಾ? ಎಂದು ಪ್ರಶ್ನಿಸಿದೆ.

ಮಾತ್ರವಲ್ಲದೇ, ಬಿಜೆಪಿಯನ್ನು #FamilyJanataParty ಎಂದು ಜರೆದಿದ್ದಲ್ಲದೇ, ಇನ್ಮುಂದೆ ನಿವೃತ್ತಿ ಪರ್ವ ಶುರುವಾದರೂ ಆಶ್ಚರ್ಯವಿಲ್ಲ! ಎಂದು ಹೇಳಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!