spot_img
Tuesday, April 28, 2026
spot_img

ಬಿಜೆಪಿ ಲೀಡರ್ ಲೆಸ್ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ : ಕಾಂಗ್ರೆಸ್‌ ವ್ಯಂಗ್ಯ

ಜನಪ್ರತಿನಿಧಿ ವಾರ್ತೆ : ಸದಾ ಕಾಂಗ್ರೆಸ್‌ನನ್ನು ಕುಟುಂಬ ರಾಜಕಾರಣದ ಪಕ್ಷ ಎಂದು ಜರೆಯುತ್ತಿದ್ದ ಬಿಜೆಪಿಗೆ ʼರಾಜ್ಯಾಧ್ಯಕ್ಷರ ಸ್ಥಾನʼ ಈಗ ಅಕ್ಷರಶಃ ತಿರುಗುಬಾಣದಂತೆ ಇರಿದಿದೆ. ಯಡಿಯೂರಪ್ಪ ತಮ್ಮ ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನವನ್ನು ಕೊಡಿಸುವುದಕ್ಕಾಗಿ ಹೈಕಮಾಂಡ್‌ ಮಟ್ಟದಲ್ಲಿ ಪ್ರಭಾವ ಬೀರಿದ್ದಾರೆ ಎಂಬ ಮಾತು ಈಗ ರಾಜಕೀಯ ವಲಯದಲ್ಲಿ ಜೋರಾಗಿ ಸದ್ದಾಗುತ್ತಿರುವುದರ ನಡುವೆ ರಾಜ್ಯ ಬಿಜೆಪಿ ಕುಟುಂಬ ರಾಜಕಾರಣದ ಬಗ್ಗೆ ಆಡಳಿತಾರೂಢ ಕಾಂಗ್ರೆಸ್‌ ವ್ಯಂಗ್ಯವಾಡಿದೆ.  

ಸಾಮಾಜಿಕ ಜಾಲತಾಣ ʼಎಕ್ಸ್‌ʼನ ತನ್ನ ಅಧಿಕೃತ ಖಾತೆಯ ಮೂಲಕ ಟೀಕಿಸಿದ ಕಾಂಗ್ರೆಸ್‌, ಯಡಿಯೂರಪ್ಪನವರ ಮಗನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡುವ ಮೂಲಕ ಬಿಜೆಪಿ ಲೀಡರ್ ಲೆಸ್ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಅಪಹಾಸ್ಯ ಮಾಡಿದೆ.

ದಶಕಗಳ ಕಾಲ ಪಕ್ಷದಲ್ಲಿ ದುಡಿದವರು ಹಲವರಿದ್ದರೂ “ಎಳೆ ಹುಡುಗ”ನಿಗೆ ಪಟ್ಟ ಕಟ್ಟುವ ಮೂಲಕ ಉಳಿದವರೆಲ್ಲ ಅನರ್ಹರು ಎಂಬ ಸಂದೇಶ ನೀಡಿದ್ದೇ ಅಥವಾ ಕುಟುಂಬ ರಾಜಕಾರಣಕ್ಕೆ ಮಣಿದಿದ್ದೇ ? ರಾಜ್ಯ ಬಿಜೆಪಿ ಉತ್ತರಿಸುವುದೇ? ಎಂದು ಪ್ರಶ್ನೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!