spot_img
Wednesday, January 22, 2025
spot_img

ನವೆಂಬರ್‌ 15ಕ್ಕೆ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕಾರ : ಬಿ. ವೈ ವಿಜಯೇಂದ್ರ

ಜನಪ್ರತಿನಿಧಿ ವಾರ್ತೆ : ಬಿಜೆಪಿ ರಾಜ್ಯ ಘಟಕದ ರಾಜ್ಯಾಧ್ಯಕ್ಷನಾಗಿ ನೇಮಕೊಂಡ ಮೇಲೆ ಮೊದಲಬಾರಿಗೆ ತುಮುಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ನಿಯೋಜಿತ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ನವೆಂಬರ್‌ 15 ರಂದು ಬೆಂಗಲೂರಿನ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ್‌ ಸ್ವಾಮೀಜಿ ಗದ್ದುಗೆಯನ್ನು ದರ್ಶನ ಪಡೆದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಎಲ್ಲಾ ಹಿರಿಯರ ಸಮ್ಮುಖದಲ್ಲಿ ನವೆಂಬರ್‌ 15 ರಂದು ಬೆಂಗಳೂರಿನ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಅಧಿಕಾರ ಸ್ವೀಕರಿಸಲಿದ್ದೇನೆ. ನವೆಂಬರ್‌ 16ರಂದು ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಪಂಚರಾಜ್ಯ ಚುನಾವಣೆ ನಡೆಯುತ್ತಿರುವುದರಿಂದ ರಾಷ್ಟ್ರೀಯ ನಾಯಕರು ಯಾರೂ ಬರುವುದಕ್ಕೆ ಸಾಧ್ಯವಿಲ್ಲ. ನವೆಂಬರ್‌ 16 ಮತ್ತು 17 ರಂದು ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಕೇಂದ್ರದಿಂದ ವೀಕ್ಷಕರು ಬರುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ವಿಚಾರದಲ್ಲಿ ಪಕ್ಷದ ಒಳಗೆ ಎದ್ದಿರುವ ಅಸಮಧಾನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೊಡ್ಡ ಪಕ್ಷವೆಂದ ಮೇಲೆ ಸಣ್ಣ ಪುಟ್ಟ ಅಸಮಾಧಾನಗಳು ಸಹಜ. ಸಣ್ಣ ಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿ ಕೆಲವೊಂದು ನಿರ್ಣಯ ತೆಗೆದುಕೊಳ್ಳುವಾಗ ಆಗುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಕಟ್ಟುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದರು.

ಪಕ್ಷದಲ್ಲಿ ಯಾರನ್ನೂ ಸೈಡ್‌ ಲೈನ್‌ ಮಾಡುತ್ತಿಲ್ಲ. ಮಾನ್ಯ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದಾಗ ತಮ್ಮ ವಯಸ್ಸಿಗೂ ಮೀರಿ ಪಕ್ಷಕ್ಕಾಗಿ ದುಡಿದಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಸಕ್ರೀಯವಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಪಕ್ಷದ ನಾಯಕನ ಆಯ್ಕಯೆ ನಂತರ ದೆಹಲಿಗೆ ಗಿ ಹೈಕಮಾಂಡ್‌ ಜೊತೆ ಲೋಕಸಭಾ ಚುನಾವಣೆಯ ತಯಾರಿಯ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.  

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!