Sunday, September 8, 2024

ಬಸ್ರೂರು ಸೈಂಟ್ ಫಿಲಿಪ್ ನೇರಿ ಸೆಂಟ್ರಲ್ ಸ್ಕೂಲ್: ‘ಕನ್ನಡ ಕಲರವ’

ಕುಂದಾಪುರ: ಕನ್ನಡ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಸೈಂಟ್ ಫಿಲಿಪ್ ನೇರಿ ಸೆಂಟ್ರಲ್ ಸ್ಕೂಲ್ ಬಸ್ರೂರು ಇಲ್ಲಿ “ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ಕಲರವ” ಕಾರ್ಯಕ್ರಮ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಭಾಷಾಭಿಮಾನದ ಅರಿವು ಮೂಡಿಸಿದರು. ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ರಾಧಾಕೃಷ್ಣ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಸಿ.ವೀಣಾ ವಹಿಸಿದ್ದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶಾಲಾ ವಾಚನಾಲಯಕ್ಕೆ ಪುಸ್ತಕಗಳನ್ನು ಉಚಿತವಾಗಿ ನೀಡಲಾಯಿತು. ಶಾಲಾ ಶಿಕ್ಷಕಿ ಸುನೀತಾ ಸ್ವಾಗತಿಸಿ, ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ದಿನಕರ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!