spot_img
Tuesday, April 28, 2026
spot_img

ನೇಜಾರು ಕೊಲೆ ಪ್ರಕರಣ : ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡ ಆರೋಪಿ ಪ್ರವೀಣ್‌ : ಎಸ್‌ಪಿ ಮಾಹಿತಿ

ಜನಪ್ರತಿನಿಧಿ ವಾರ್ತೆ : ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಚಾರಣೆ ವೇಳೆ ತಾನೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

ಆರೋಪಿ ತನ್ನ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಹತ್ಯೆಗೀಡಾಗಿರುವ ಅಯ್ನಾಝ್ ಳನ್ನು ಕೊಲೆ ಮಾಡುವುದು ಉದ್ದೇಶವಾಗಿತ್ತು ಎಂದು ಹೇಳಿಕೊಂಡಿದ್ದಾನೆ. ಕೃತ್ಯ ಎಸಗುವ ವೇಳೆ ಇತರರು ತಡೆಯಲು ಪ್ರಯತ್ನಿಸಿದ್ದರಿಂದ ಹತ್ಯೆ ಮಾಡಲಾಗಿದೆ, ಸಾಕ್ಷ್ಯ ನಾಶ ಮಾಡುವ ಉದ್ದೇಶವೂ ಹತ್ಯೆಗಳ ಹಿಂದಿದೆ ಎಂದು ಹೇಳಿದರು. ಅವರ ಹೇಳಿಕೆಗಳ ಸತ್ಯಾಸತ್ಯತೆಯ ಬಗ್ಗೆ ನಾವು ಇನ್ನಷ್ಟು ತನಿಖೆ ನಡೆಸುತ್ತಿದ್ದೇವೆ ಎಂದು ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಇನ್ನು, ಹತ್ಯೆಗೆ ಎರಡು ಮೂರು ಕಾರಣಗಳಿರಬಹುದು. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದ್ದು, ಎಲ್ಲಾ ಶಂಕಿತರನ್ನು ವಿಚಾರಣೆ ಮಾಡಿದ ನಂತರವೇ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ತಾಂತ್ರಿಕ ಸಾಕ್ಷ್ಯ ಮತ್ತು ಗುಪ್ತಚರ ವರದಿಗಳ ಆಧಾರದ ಮೇಲೆ ಶಂಕಿತ ಆರೋಪಿ ಪ್ರವೀಣ್ ಚೌಗಲೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಸದ್ಯ ಆತ ಪೊಲೀಸ್ ಕಸ್ಟಡಿಯಲ್ಲಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ವಿಚಾರಣೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಇನ್ನು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಬಿಗಿ ಭದ್ರತೆಯ ನಡುವೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಎಸ್ಪಿ, ಡಿವೈಎಸ್ಪಿ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!