spot_img
Tuesday, April 28, 2026
spot_img

ನ.18ರಂದು ಕುಂದಾಪುರ ವೆಂಕಟರಮಣ ಕಾಲೇಜಿನಲ್ಲಿ ವ್ಯವಹಾರದ ದಿನ

ಕುಂದಾಪುರ: ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ‘ವ್ಯವಹಾರ ದಿನ-2023’ ನವಂಬರ್ 18 ಶನಿವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ತನಕ ನಡೆಯಲಿದೆ.

ಕಾರ್ಯಕ್ರಮವನ್ನು ಶ್ರೀ ವೆಂಕಟರಮಣ ದೇವ್ ಎಜುಕೇಶನ್ ಮತ್ತು ಕಲ್ಚರಲ್ ಟ್ರಸ್ಟ್ ಕುಂದಾಪುರ ಇದರ ಅಧ್ಯಕ್ಷರಾದ ಕೆ.ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕೆನರಾ ಬ್ಯಾಂಕ್ ಮಣಿಪಾಲ ಇದರ ಜನರಲ್ ಮೆನೇಜರ್ ಎಂ.ಜಿ ಪಂಡಿತ್ ಉದ್ಘಾಟನೆ ನೆರವೇರಿಸಲಿದ್ದಾರೆ. ರಾದೇಶ್ ಪ್ಲಾಸ್ಟಿಕ್ ಇಂಡಿಯಾ ಕೋಟೇಶ್ವರ ಇದರ ಕಾರ್ಯನಿರ್ವಹಕ ನಿರ್ದೇಶಕರಾದ ರಾಜೇಂದ್ರ ಡಿ. ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ರಾಧಾಕೃಷ್ಣ ಶೆಣೈ ಶುಭಸಂಸನೆಗೈಯಲಿದ್ದಾರೆ.

ವೆಂಕಟರಮಣ ಕಾಲೇಜಿನಲ್ಲಿ ನಿರಂತರವಾಗಿ ವ್ಯವಹಾರ ಮೇಳವನ್ನು ನೆಡೆಸಿಕೊಂಡು ಬರಲಾಗುತ್ತಿದೆ. ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನವನ್ನು ನೀಡುವುದು ಇದರ ಉದ್ದೇಶವಾಗಿದೆ. ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಿವಿಧ ವ್ಯವಹಾರ ಮಳಿಗೆಗಳನ್ನು ತೆರೆಯುತ್ತಾರೆ. ಅಲ್ಲದೇ ವಿವಿಧ ಪ್ರೌಢಶಾಲೆಯ ಆಸಕ್ತ ವಿದ್ಯಾರ್ಥಿಗಳು ಕೂಡಾ ಮಳಿಗೆಗಳನ್ನು ಇಡುತ್ತಾರೆ. ದಿನವಿಡಿ ನಡೆಯುವ ಕಾರ್ಯಕ್ರಮ ಜಾತ್ರೆಯಂತೆ ನಡೆಯುತ್ತದೆ. ಸಾರ್ವಜನಿಕರು, ವಿದ್ಯಾರ್ಥಿ ಪೋಷಕರು ಭಾಗವಹಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!