spot_img
Tuesday, April 28, 2026
spot_img

ಸ.ಹಿ.ಪ್ರಾ,ಶಾಲೆ ನೂಜಾಡಿ-2 ಬಗ್ವಾಡಿಯಲ್ಲಿ ಅರ್ಥಪೂರ್ಣ ಮಕ್ಕಳ ದಿನಾಚರಣೆ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಬಗ್ವಾಡಿ ಇಲ್ಲಿ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿದೆ ಆಚರಿಸಲಾಯಿತು. ಬೆಳಗ್ಗಿನಿಂದ ಮಕ್ಕಳಿಗೆ ವಿವಿಧ ಮನೋರಂಜನಾ ಆಟಗಳನ್ನು ಆಡಿಸಿ ಮಧ್ಯಾಹ್ನ ಮಕ್ಕಳಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು. ನಂತರ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿ ನಾಯಕ ರಜತ್ ಆಚಾರ್ಯ ವಹಿಸಿದ್ದರು.

ಸಭೆಯಲ್ಲಿ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಜವಹರಲಾಲ್ ನೆಹರುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸ್ಥಳೀಯ ನಿವೃತ್ತ ದಾದಿ ಸರಳ ಇವರನ್ನು ಊರಿನ ವತಿಯಿಂದ ಸನ್ಮಾನಿಸಲಾಯಿತು. ಸಭೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ರಾಜೀವ ಶೆಟ್ಟಿ ಪಂಚಾಯತ್ ಪ್ರತಿನಿಧಿ ಅಶೋಕ್ ಪೂಜಾರಿ, ಮಹಿಷಮರ್ಧಿನಿ ಯುವಕ ಮಂಡಲದ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಹಿರಿಯ ಎಸ್‌ಡಿ‌ಎಂಸಿ ಸದಸ್ಯೆ ಜ್ಯೋತಿ ಆಶಾ ಕಾರ್ಯಕರ್ತೆ ಶಾರದ, ಹಾಗೂ ಶಿಕ್ಷಕವೃಂದ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಶೈಲಜಾ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಶ್ವೇತಾ ಬಹುಮಾನಿತರ ಪಟ್ಟಿ ವಾಚಿಸಿದರು. ಶಿಕ್ಷಕಿಯರಾದ ಸ್ವಾತಿ, ಜಯಂತಿ, ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.ಸತ್ಯವತಿ ವಂದಿಸಿದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!