Sunday, September 8, 2024

ಶಾಲಾ ಮಕ್ಕಳ ಅಪೌಷ್ಟಿಕತೆಯ ನಿವಾರಣೆಗೆ ಡಿಸೆಂಬರ್‌ನಿಂದ ರಾಗಿ ಮಾಲ್ಟ್‌ : ಸಚಿವ ಮಧು ಬಂಗಾರಪ್ಪ

ಜನಪ್ರತಿನಿಧಿ ವಾರ್ತೆ : ರಾಜ್ಯದಲ್ಲಿರುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಕ್ಷೀರ ಭಾಗ್ಯದ ಜೊತೆಗೆ ʼರಾಗಿ ಮಾಲ್ಟ್‌ʼ ನೀಡಲಿ ನಿರ್ಧರಿಸಿದ್ದು, ಈ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರುಯ ಡಿಸೆಂಬರ್‌ ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಶಾಲಾ  ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್‌. ಮಧು ಬಂಗಾರಪ್ಪ ಹೇಳಿದ್ದಾರೆ.

ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರೊಂದಿಗೆ (ಡಿಡಿಪಿಐ) ಸಭೆ ನಡೆಸಿದ ಬಳಿಕ ವರದಿಗಾರರನ್ನು ಉದ್ದೇಶಿಸಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.

ಮಧ್ಯಾಹ್ನದ ಬಿಸಿಯೂಟ ಯೋಜನೆ ಅನೇಕ ವರ್ಷಳಿಂದ ಉತ್ತಮವಾಗಿ ನಡೆಯುತ್ತಾ ಬಂದಿದೆ. ಮಕ್ಕಳಲ್ಲಿ ಅಪೌಷ್ಠಿಕತೆ ಕಡಿಮೆ ಮಾಡುವ ಉದ್ದೇಶದಿಂದ ಎರಡು ದಿನ ಮೊಟ್ಟೆ. ಮೊಟ್ಟೆ ಸೇವಿಸದವರಿಗೆ ಚಿಕ್ಕಿ, ಬಾಳೆಹಣ್ಣನ್ನು ನೀಡಲಾಗುತ್ತಿದೆ. ಡಿಸೆಂಬರ್‌ನಿಂದ ಇದರ ಜೊತೆಗೆ ರಾಗಿ ಮಾಲ್ಟ್‌ ಕೂಡ ನೀಡಲು ತೀರ್ಮಾನಿಸಲಾಗಿದೆ. ರಾಗಿ ಮಾಲ್ಟ್‌ ನನ್ನು ಈಗಾಗಲೇ ಪ್ರಾಯೋಗಿಕವಾಗಿ ನೀಡಲಾಗುತ್ತಿದ್ದು, ಇದನ್ನು ಎಲ್ಲಾ ಸರಕಾರಿ, ಅನುದಾನಿತ ಶಾಲಾ ಮಕ್ಕಳಿಗೂ ವಿಸ್ತರಿಸುವುದಕ್ಕೆ ಇಲಾಖೆ ಯೋಜನೆ ರೂಪಿಸಿದೆ. ಬಿಸಿ ಊಟದ ಜೊತೆಗೆ ಒಂದು ಲೋಟ ಮಾಲ್ಟ್‌ ನೀಡಲಾಗುವುದು. ಶಾಲೆಯಲ್ಲೇ ರಾಗಿ ಮಾಲ್ಟ್‌ ತಯಾರು ಮಾಡಲಾಗುತ್ತದೆ. ರಾಗಿ ಮಾಲ್ಟ್‌ ಮಾಡುವುದಕ್ಕೆ ಬೇಕಾಗಿ ರಾಗಿ ಹಿಟ್ಟನ್ನು ಶಾಲೆಗಳಿಗೆ ಪೂರೈಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು, ಈ  ಬಗ್ಗೆ ರಾಜ್ಯ ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಗಣನೀಯವಾಗಿ ಏರಿಕೆ ಕಂಡಿರುವ ಅಪೌಷ್ಟಿಕತೆಯ ನಿವಾರಣೆಗೆ ನಮ್ಮ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದೆ.

ಇದರೊಂದಿಗೆ ಶಾಲಾ ಮಕ್ಕಳ ಬಿಸಿಯೂಟದೊಂದಿಗೆ ರಾಗಿ ಮಾಲ್ಟ್ ನೀಡುವ ಮೂಲಕ ಅಪೌಷ್ಟಿಕತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಮಹತ್ತರ ಹೆಜ್ಜೆ ಇಟ್ಟಿದೆ ಎಂದು ಹೇಳಿದೆ.

13 ಸಾವಿರ ಶಿಕ್ಷಕರ ನೇಮಕ :

13 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇದೆ. ಅಂದಾಜು 400-500 ಹುದ್ದೆಗಳ ನೇಮಕ ಮಾತ್ರ ಕೊಂಚ ತಡವಾಗಿದೆ. ಇದನ್ನು ಬಿಟ್ಟರೇ ಅಗತ್ಯವಿರುವ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವ ವಿಚಾರದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ್ದೇನೆ. ಮುಖ್ಯಮಂತ್ರಿಗಳು ಈ ವಿಚಾರಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!