spot_img
Tuesday, April 28, 2026
spot_img

ಗಂಗೊಳ್ಳಿ ಅಗ್ನಿ ದುರಂತ: 10 ಕೋಟಿ ರೂ. ಪರಿಹಾರವನ್ನು ನೀಡಲು ಮುಖ್ಯಮಂತ್ರಿಗಳಿಗೆ ಮನವಿ-ಶಾಸಕ ಗುರುರಾಜ ಗಂಟಿಹೊಳೆ


ಗಂಗೊಳ್ಳಿ : ಗಂಗೊಳ್ಳಿಯಲ್ಲಿ ಅಗ್ನಿ ದುರಂತಕ್ಕೆ ಅನೇಕ ಬೋಟುಗಳ, ಬಲೆ ಮತ್ತಿತರ ಸಾಮಾಗ್ರಿಗಳು ಸುಟ್ಟು ಹೋಗಿ ಅಪಾರ ನಷ್ಟವಾಗಿದೆ. ಇಲ್ಲಿನ ವಾಸ್ತವ ಸ್ಥಿತಿಯನ್ನು ಸಂಸದರಾದ ಬಿ.ವೈ.ರಾಘವೇಂದ್ರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಲಾಗಿದೆ. ಸರಕಾರದ ಮಟ್ಟದಲ್ಲಿ ಇಲಾಖೆಯಿಂದ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಅಥವಾ ಮುಖ್ಯಮಂತ್ರಿಗಳ ವಿವೇಚನಾ ನಿಧಿಯಿಂದ 10 ಕೋಟಿ ರೂ. ಪರಿಹಾರವನ್ನು ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಗಂಗೊಳ್ಳಿಯಲ್ಲಿ ನಡೆದ ಬೋಟ್ ಅಗ್ನಿ ದುರಂತ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಮೀನುಗಾರ ಮುಖಂಡರು ಮತ್ತು ನಷ್ಟಕ್ಕೆ ಒಳಗಾದ ಬೋಟ್ ಮಾಲೀಕರ ಜೊತೆ ಚರ್ಚೆ ನಡೆಸಿ ಮಾತನಾಡಿದರು.

ದೈನಂದಿನ ದಿನಗಳಲ್ಲಿ ಕಷ್ಟಕರ ಜೀವನ ನಡೆಸುತ್ತಿರುವ ಮೀನುಗಾರರು ಕಷ್ಟಪಟ್ಟು ದುಡಿಯುತ್ತಿರುವವರು ಅನೇಕ ಕುಟುಂಬಗಳು ಒಂದೇ ರಾತ್ರಿಯಲ್ಲಿ ಇವತ್ತು ನಿರ್ಗತಿಕರಾಗುವ ಪರಿಸ್ಥಿತಿಗೆ ಬಂದಿದ್ದಾರೆ. ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಮೀನುಗಾರರ ಹಾಗೂ ನಷ್ಟಕ್ಕೊಳಗಾದವರ ಅಳಲನ್ನು ಸರಕಾರಕ್ಕೆ ಮೂಲಕ ಮುಟ್ಟಿಸುವ ಕೆಲಸವನ್ನು ಮಾಡಲಾಗುವುದು ಎಂದು ಹೇಳಿದ ಅವರು, ಗಂಗೊಳ್ಳಿಯಲ್ಲಿ ತಾತ್ಕಾಲಿಕವಾಗಿಯಾದರೂ ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಅಗ್ನಿಶಾಮಕ ಘಟಕ ಸ್ಥಾಪನೆ ಮಾಡುವ ಹಾಗೂ ಪಂಪ್‌ಹೌಸ್ ನಿರ್ಮಿಸುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಈ ಘಟನೆ ನಮಗೆ ಪಾಠ. ಇದನ್ನು ಪುನರಾವರ್ತನೆ ಮಾಡಲು ಬಿಡುದಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮತ್ತು ಕೈಗೊಳ್ಳಬಹುದಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ಸ್ಥಳೀಯ ಮೀನುಗಾರ ಸಂಘಟನೆಗಳ ಜೊತೆ ಮಾತನಾಡಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ ಅವರು, ಸಂಕಷ್ಟದಲ್ಲಿರುವ ಮೀನುಗಾರರಿಗೆ ಗರಿಷ್ಠ ಪರಿಹಾರ ಒದಗಿಸಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು, ತಾಪಂ ಮಾಜಿ ಸದಸ್ಯ ಸುರೇಂದ್ರ ಖಾರ್ವಿ, ಚಂದ್ರ ಖಾರ್ವಿ ಲೈಟ್‌ಹೌಸ್, ಅಶೋಕ ಎನ್.ಡಿ., ಗ್ರಾಪಂ ಸದಸ್ಯರಾದ ಬಿ.ಗಣೇಶ ಶೆಣೈ, ಶಾಂತಿ ಖಾರ್ವಿ, ಸಾವಿತ್ರಿ ಖಾರ್ವಿ, ಬಿ.ರಾಘವೇಂದ್ರ ಪೈ, ಮಂತಿ ಶ್ರೀನಿವಾಸ ಖಾರ್ವಿ, ಬಿ.ಲಕ್ಷ್ಮೀಕಾಂತ ಮಡಿವಾಳ, ಮೀನುಗಾರ ಮುಖಂಡರಾದ ವಿಕ್ರಮ್, ರಮೇಶ ಕುಂದರ್, ಸ್ಥಳೀಯ ಬಿಜೆಪಿ ಮುಖಂಡರು, ಮೀನುಗಾರ ಮುಖಂಡರು, ಮೀನುಗಾರರು ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!