spot_img
Tuesday, April 28, 2026
spot_img

‘ನಾ ಕಂಡಂತೆ ಪೊಲೀಸ್’ ಪ್ರಬಂಧ ಸ್ಪರ್ಧೆಯ ಪೋಸ್ಟರ್ ಬಿಡುಗಡೆ

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕನ್ನಡ ಶಾಲೆ ಉಳಿವಿಗಾಗಿ ಮತ್ತು ವಿದ್ಯಾರ್ಥಿಗಳ ಪ್ರೋತ್ಸಾಹಕ್ಕಾಗಿ ‘ನಾ ಕಂಡಂತೆ ಪೊಲೀಸ್’ ಎಂಬ ವಿಷಯದ ಕುರಿತು ನ.18 ರಂದು ಕುಂದಾಪುರದಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ ಸಿದ್ಧಲಿಂಗಪ್ಪ ಉದ್ಘಾಟಿಸಲಿದ್ದಾರೆ.

‘ನಾ ಕಂಡಂತೆ ಪೊಲೀಸ್’ ಪ್ರಬಂಧ ಸ್ಪರ್ಧೆಯ ನಿಯಮಾವಳಿಯ ಪೋಸ್ಟರ್ ಅನ್ನು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ ಸಿದ್ಧಲಿಂಗಪ್ಪ ಅವರು ಉಡುಪಿಯ ಕಛೇರಿಯಲ್ಲಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ ರಾಯಪ್ಪನಮಠ, ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ, ಕೋಶಾಧಿಕಾರಿ ಲೋಕೇಶ್ ಆಚಾರ್ಯ, ಜೊತೆ ಕಾರ್ಯದರ್ಶಿ ಯೋಗೀಶ್ ಕುಂಭಾಶಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!