spot_img
Tuesday, April 28, 2026
spot_img

ಭಾರತೀಯ ಸೇನೆಗೆ ಆಯ್ಕೆಗೊಂಡಿರುವ ಸುನೀತಾ ಪೂಜಾರಿ ಅವರಿಗೆ ಮಾತೃಭೂಮಿ ಯುವ ಸಂಘಟನೆಯಿಂದ ಸನ್ಮಾನ

ಕುಂದಾಪುರ : ಬಿ.ಎಸ್.ಎಫ್ ಕ್ಯಾಂಪ್ ನಲ್ಲಿ ತರಬೇತಿ ಪಡೆದು ಭಾರತ ಸೇನೆಯಿಂದ ಭಾರತ-ಬಾಂಗ್ಲಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸಲು ತೆರಳುತ್ತಿರುವ ಹೆಮ್ಮಾಡಿಯ ಸುನೀತಾ ಪೂಜಾರಿ ಅವರನ್ನು ಇತ್ತೀಚೆಗೆ ವಂಡ್ಸೆಯ ಆತ್ರಾಡಿ ಮಾತೃಭೂಮಿ ಯುವ ಸಂಘಟನೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ವಂಡ್ಸೆಯ ಶ್ರೀಯಾ ಕನ್ವನ್‌ಷನ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಭಾರತೀಯ ಸೇನೆಗೆ ಆಯ್ಕೆಗೊಂಡು ಕರ್ತವ್ಯಕ್ಕೆ ತೆರಳಲು ಸಜ್ಜಾಗಿರುವ ಸುನೀತಾ ಪೂಜಾರಿ ಅವರನ್ನು ಸನ್ಮಾನಿಸಿ, ಅಭಿನಂದನಾ ಮಾತುಗಳನ್ನಾಡಿದರು.

ಗ್ರಾ.ಪಂ. ನಿಕಟಪೂರ್ವಾಧ್ಯಕ್ಷರು, ಮಾತೃಭೂಮಿ ಯುವ ಸಂಘಟನೆ ಗೌರವ ಸಲಹೆಗಾರರಾದ ಉದಯ ಕುಮಾರ್ ಶೆಟ್ಟಿ, ಗ್ರಾ.ಪಂ. ಮಾಜಿ ಅಧ್ಯಕ್ಷರು, ಮಾತೃಭೂಮಿ ಯುವ ಸಂಘಟನೆ ಗೌರವಾಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಕಲ್ಮಡಿ, ಮಾತೃಭೂಮಿ ಯುವ ಸಂಘಟನೆ ಅಧ್ಯಕ್ಷ ಶಶಿಧರ ಆಚಾರ್ಯ, ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್, ಗ್ರಾ.ಪಂ.ಪಂಚಾಯತ್ ಉಪಾಧ್ಯಕ್ಷ ಗೋವರ್ಧನ್ ಜೋಗಿ, ತಾ.ಪಂ. ಮಾಜಿ ಸದಸ್ಯ ಉದಯ ಜಿ ಪೂಜಾರಿ, ಜೆಸಿ‌ಐ ಮಾರಣಕಟ್ಟೆ ಅಧ್ಯಕ್ಷ ಗುರುಪ್ರಸಾದ್, ಮಾತೃಭೂಮಿ ಯುವ ಸಂಘಟನೆ ನಿಕಟಪೂರ್ವಾಧ್ಯಕ್ಷ ಪ್ರಸಾದ್ ಆಚಾರ್ಯ, ಮಾಜಿ ಅಧ್ಯಕ್ಷರಾದ ಸಂದೇಶ್ ಶೆಟ್ಟಿ, ರಮೇಶ ಪೂಜಾರಿ ಬಳಿಹಿತ್ಲು, ಕಾರ್ಯದರ್ಶಿ ವಿನಂತ ಗಾಣಿಗ, ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ ಹರವರಿ, ವಂಡ್ಸೆ ವ್ಯವಸಾಯಿಕ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಪೂಜಾರಿ, ಹಕ್ಲಾಡಿ ಗ್ರಾ.ಪಂ. ಸದಸ್ಯ ಅಶೋಕ್ ಪೂಜಾರಿ, ಮಾತೃಭೂಮಿ ಯುವ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ವಾಸು ಜಿ.ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!