spot_img
Wednesday, January 22, 2025
spot_img

ವಿಧಾನಸಭಾ ವಿಪಕ್ಷ ನಾಯಕನ ಆಯ್ಕೆ : ಶಾಸಕ ಯತ್ನಾಳ್‌ ಮನೆಗೆ ವೀಕ್ಷಕರ ಭೇಟಿ : ವಿಧಾನ ಪರಿಷತ್‌ ನಾಯಕನ ಸ್ಥಾನ ಹಿಂದುಳಿದ ವರ್ಗಕ್ಕೆ !?

ಜನಪ್ರತಿನಿಧಿ ವಾರ್ತೆ : ವಿಧಾನಸಭೆ ಪ್ರತಿಪಕ್ಷ ನಾಯಕರ ಆಯ್ಕೆ ಸಂಬಂಧಿಸಿದಂತೆ ಇಂದು(ಶುಕ್ರವಾರ) ಸಂಜೆ ಆರು ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಐಟಿಸಿ ಗಾರ್ಡೇನಿಯಾದಲ್ಲಿ ಸಭೆ ನಡೆಯಲಿದೆ.

ರಾಜ್ಯ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಬಿಜೆಪಿ ಹೈಕಮಾಂಡ್‌ ವೀಕ್ಷಕರಾಗಿ ರಾಜ್ಯಕ್ಕೆ ಆಗಮನಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್‌ ಕುಮಾರ್‌ ಗೌತಮ್‌ ಸಮ್ಮುಖದಲ್ಲಿ ವಿಧಾನಸಭೆಯ ನೂತನ ವಿಪಕ್ಷ ನಾಯಕನ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ನಡುವೆ ವೀಕ್ಷರಾಗಿ ಆಗಮಿಸಿದ ನಿರ್ಮಲಾ ಸೀತಾರಾಮನ್‌, ದುಶ್ಯಂತ್‌ ಕುಮಾರ್‌ ಗೌತಮ್‌ ಬೆಂಗಳೂರಿನ ಪ್ರಕಾಶ್‌ ನಗರದಲ್ಲಿರುವ ಶಾಸಕ ಬಸವವಗೌಡ ಪಾಟೀಲ್‌ ಯತ್ನಾಳ್‌ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿರುವುದು ರಾಜಕೀಯ ಕುತೂಹಲ ಹೆಚ್ಚಿಸಿದೆ.

ವಿಧಾನಸಭಾ ಪ್ರತಿಪಕ್ಷ ಸ್ಥಾನವನ್ನು ಒಕ್ಕಲಿಗ ನಾಯಕನೋರ್ವನ ಪಾಲಿಗೆ ಮತ್ತು ವಿಧಾನ ಪರಿಷತ್‌ ವಿಪಕ್ಷ ನಾಯಕನ ಸ್ಥಾನ ಕೋಟಾ ಶ್ರೀನಿವಾಸ ಪೂಜಾರಿ ಅವರ ಪಾಲಿಗೆ (ಹಿಂದುಳಿದ ವರ್ಗ) ಒದಗಲಿದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.  

ಇನ್ನು, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಾತಿ ಲೆಕ್ಕಚಾರ ಮಾಡಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಿ, ವಿಧಾನಸಭಾ ಪ್ರತಿಪಕ್ಷ ನಾಯಕನ ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ  ಹಾಗೂ ವಿಧಾನಪರಿಷತ್‌ ವಿಪಕ್ಷ ನಾಯಕನ ಸ್ಥಾನವನ್ನು ಹಿಂದುಳಿದ ವರ್ಗಕ್ಕೆ ನೀಡುವ ಚುನಾವಣಾ ತಂತ್ರಗಾರಿಕೆಗೆ ಬಿಜೆಪಿ ಮುಂದಾಗಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!