spot_img
Tuesday, April 28, 2026
spot_img

ಗಂಗೊಳ್ಳಿ ಅಗ್ನಿ ಆಕಸ್ಮಿಕ: 15 ದಿನದಲ್ಲಿ ಪರಿಹಾರ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಕುಂದಾಪುರ: ಉಡುಪಿಯ ಗಂಗೊಳ್ಳಿಯ ಬಂದರು ಸಮೀಪದ ಬೋಟ್ ನಿಲುಗಡೆ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿದರು.

ಅಗ್ನಿ ಆಕಸ್ಮಿಕ ನಡೆದ ಸ್ಥಳವನ್ನು ವೀಕ್ಷಿಸಿದ ಸಚಿವರು, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರರೊಂದಿಗೆ ಚರ್ಚೆ ನಡೆಸಿದರು.

ಅಗ್ನಿ ದುರಂತದಿಂದ ಸುಮಾರು 13 ರಿಂದ 15ಕೋಟಿ ರೂ ನಷ್ಟ ಅಂದಾಜಿಸಲಾಗಿದೆ. ಇನ್ನು 15 ದಿನಗಳಲ್ಲಿ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಸ್ಥಳದಲ್ಲಿದ್ದ ಮೀನುಗಾರರು ಹಾಗೂ ಬೋಟ್ ಕಳೆದುಕೊಂಡ ಮಾಲೀಕರಿಗೆ ಸ್ವಾಂತನ ಹೇಳಿದರು.

9 ಬೋಟ್‌ಗಳು, ಎರಡು ದೋಣಿಗಳು ಸಂಪೂರ್ಣ ಸುಟ್ಟಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು, ಈ ಕುರಿತು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವರೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದರು.

ಮುಂದೆ ಇಂತಹ ದುರ್ಘಟನೆ ಮರುಕಳಿಸಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ಬಂದರಿನಲ್ಲಿ ಅಗ್ನಿ ಶಾಮಕ ದಳ ಸ್ಥಾಪನೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಮಾಜಿ ಶಾಸಕ ಗೋಪಾಲ ಪೂಜಾರಿ, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!