spot_img
Tuesday, April 28, 2026
spot_img

ಕುಂದಾಪುರ ಡಾ.ಬಿ. ಬಿ. ಹೆಗ್ಡೆ ಕಾಲೇಜು ಎನ್ನೆಸ್ಸೆಸ್ ಘಟಕ : ಪೋಕ್ಸೋ ಕುರಿತು ಅರಿವು

ಕುಂದಾಪುರ: ಮಕ್ಕಳ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ನಿಟ್ಟಿನಿಂದ ಜಾರಿಗೆ ಬಂದ ಕಾಯಿದೆ ಪೋಕ್ಸೋ. ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲತೆಯ ಅಪರಾಧಗಳಿಂದ ಮಕ್ಕಳ ರಕ್ಷಣೆಗಾಗಿ ದೃಢವಾದ ಕಾನೂನು ಚೌಕಟ್ಟನ್ನು ಒದಗಿಸಲು ಈ ಕಾಯಿದೆಯನ್ನು ಜಾರಿಗೆ ತರಲಾಯಿತು. ಹಾಗೆಯೇ ಈ ಕಾದೆಯ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕಾಗಿರುವುದು ವರ್ತಮಾನದ ತುರ್ತು ಎಂದು ಹಟ್ಟಿಯಂಗಡಿ ನಮ್ಮ ಭೂಮಿ ಸಂಸ್ಥೆಯ ಸಿ.ಡಬ್ಲ್ಯೂ.ಸಿ. ಸಂಯೋಜಕ ಶ್ರೀನಿವಾಸ ಗಾಣಿಗ ಹೇಳಿದರು.

ಅವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಎನ್.ಎಸ್.ಎಸ್. ಸ್ವಯಂಸೇವಕರಿಗೆ ಹಮ್ಮಿಕೊಂಡ ಪೋಕ್ಸೋ ಕುರಿತ ಅರಿವು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಮಕ್ಕಳ ಹಕ್ಕುಗಳ ಕುರಿತು ನಮ್ಮ ಭೂಮಿ ಸಂಸ್ಥೆಯ ಸಿ.ಡಬ್ಲ್ಯೂ.ಸಿ.ಯ ಪಂಚಾಯತ್ ಮಟ್ಟದ ಸಂಯೋಜಕ ಗಣೇಶ್ ಶಾನ್ಕಟ್ ಮಾ”ತಿ ನೀಡಿದರು. ಸಿ.ಡಬ್ಲ್ಯೂ.ಸಿ.ಯ ಪಂಚಾಯತ್ ಮಟ್ಟದ ಸಂಯೋಜಕರಾದ ಅನಿತಾ, ಆಶಾ ಉಪಸ್ಥಿತರಿದ್ದರು.

ಕಾಲೇಜಿನ ಉಪಪ್ರಾಂಶುಪಾಲ ಮತ್ತು ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಸ್ವಾಗತಿಸಿದರು.
ಎನ್.ಎಸ್.ಎಸ್. ಸ್ವಯಂಸೇವಕರಾದ ಸಹನಾ ಶೆಟ್ಟಿ ವಂದಿಸಿ, ವೈಷ್ಣವಿ ಎಮ್.ಎಸ್. ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!