Sunday, September 8, 2024

ಗಂಗೊಳ್ಳಿ-ಕುಂದಾಪುರ ನಡುವೆ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಸಂಸದರು, ಶಾಸಕರಿಗೆ ಮನವಿ

ಗಂಗೊಳ್ಳಿ : ಗಂಗೊಳ್ಳಿ ಮತ್ತು ಕುಂದಾಪುರ ನಡುವೆ ಪಂಚಗಂಗಾವಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಬೇಕೆಂದು ಆಗ್ರಹಿಸಿ ಗಂಗೊಳ್ಳಿ-ಕುಂದಾಪುರ ಸೇತುವೆ ಹೋರಾಟ ಸಮಿತಿ ವತಿಯಿಂದ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಗಂಗೊಳ್ಳಿಯಲ್ಲಿ ಗುರುವಾರ ಮನವಿ ಸಲ್ಲಿಸಲಾಯಿತು.

ಸಂಸದರಿಗೆ ಮನವಿ ಸಲ್ಲಿಸಿ ಹೋರಾಟ ಸಮಿತಿ ಅಧ್ಯಕ್ಷ ಉಮಾನಾಥ ದೇವಾಡಿಗ, ಗಂಗೊಳ್ಳಿ ಮತ್ತು ಕುಂದಾಪುರ ನಡುವೆ ಸೇತುವೆ ನಿರ್ಮಿಸಬೇಕೆನ್ನುವುದು ಗಂಗೊಳ್ಳಿ ಗ್ರಾಮಸ್ಥರ ಹಲವು ದಶಕಗಳ ಬೇಡಿಕೆ. ಎರಡು ಊರಿನ ನಡುವಿನ ಅಂತರ ಸರಿಸುಮಾರು 1.5 ಕಿಲೋ ಮೀಟರ್. ಆದರೆ ಬಸ್ ಮೂಲಕ ಪ್ರಯಣ ಬೆಳೆಸಿದರೆ 18 ಕಿಲೋಮೀಟರ್ ಕ್ರಮಿಸಬೇಕು. ಬಸ್ಸಿನಲ್ಲಿ 45 ನಿಮಿಷ ವ್ಯಯಿಸಬೇಕು. ಕೆಲವೊಮ್ಮೆ ಬೇರೆ ಬೇರೆ ಕಾರಣಕ್ಕೆ ಒಂದು ತಾಸು ವ್ಯಯಿಸಬೇಕಾಗುತ್ತದೆ. ವ್ಯವಹಾರಿಕವಾಗಿ ಗಂಗೊಳ್ಳಿ ಮತ್ತು ಕುಂದಾಪುರದ ನಡುವೆ ನಿಕಟ ಸಂಪರ್ಕ ಇರುವುದರಿಂದ ಸೇತುವೆ ನಿರ್ಮಾಣ ಆದಲ್ಲಿ ಕುಂದಾಪುರ ಮತ್ತು ಗಂಗೊಳ್ಳಿ ಏಕಕಾಲದಲ್ಲಿ ಬೆಳವಣಿಗೆ ಕಂಡುಕೊಳ್ಳಲಿದೆ. ಸೇತುವೆ ಆದಲ್ಲಿ ಕುಂದಾಪುರ, ಗಂಗೊಳ್ಳಿ, ಗುಜ್ಜಾಡಿ, ತ್ರಾಸಿ ಪೇಟೆಯ ಬೆಳವಣಿಗೆಯಾಗಲಿದೆ. ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದು ಎನಿಸಿರುವ ಪಂಚಗಂಗಾವಳಿ ನದಿ ತೀರದಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ ಒದಗಿ ಬರಲಿದೆ ಎಂದು ವಿವರಿಸಿದರು.

ಆದ್ದರಿಂದ ಗಂಗೊಳ್ಳಿ ಮತ್ತು ಕುಂದಾಪುರ ನಡುವೆ ಪಂಚಗಂಗಾವಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಬೇಕೆಂದು ಕಳೆದ ಹಲವು ವರ್ಷಗಳಿಂದ ನಮ್ಮ ಬೇಡಿಕೆಯನ್ನು ಸರಕಾರದ ಮುಂದೆ ಇಡುತ್ತಾ ಬಂದಿದ್ದೇವೆ. ಪ್ರವಾಸೋದ್ಯಮ, ಸಂಪರ್ಕ ಉದ್ದೇಶ, ಪೇಟೆ ಪಟ್ಟಣಗಳ ಬೆಳವಣಿಗೆಗಾಗಿ ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣ ಬೇಡಿಕೆ ಈಡೇರಿಕೆಗೆ ಸ್ಪಂದಿಸುವಂತೆ ಸಮಿತಿ ಸದಸ್ಯರು ಮನವಿ ಮಾಡಿದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರ ಸರಕಾರದ ಸಾಗರ ಮಾಲಾ ಯೋಜನೆಯಡಿ ಸೇತುವೆ ನಿರ್ಮಾಣಕ್ಕೆ ಈಗಾಗಲೇ ಮನವಿ ಸಲ್ಲಿಸಿ ಕೇಂದ್ರ ಸಚಿವರೊಂದಿಗೆ ಮಾತುಕತೆ ಚರ್ಚೆ ಮಾಡಲಾಗಿದೆ. ಈ ಬಗ್ಗೆ ಡಿಪಿ‌ಆರ್ ಕೂಡ ಮಾಡಲಾಗಿದ್ದು, ಸೇತುವೆ ನಿರ್ಮಾಣಕ್ಕೆ ಸುಮಾರು 600 ಕೋಟಿ ರೂ. ವೆಚ್ಚ ತಗಲುವ ಸಾಧ್ಯತೆ ಇದೆ. ಆದ್ಯತೆ ಮೇರೆಗೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಗಂಗೊಳ್ಳಿ-ಕುಂದಾಪುರ ಸೇತುವೆ ಹೋರಾಟ ಸಮಿತಿ ಕಾರ್ಯದರ್ಶಿ ನವೀನ್ ಗಂಗೊಳ್ಳಿ, ಸಮಿತಿ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು, ಬಿಜೆಪಿ ಪಕ್ಷದ ಮುಖಂಡರು, ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!