spot_img
Tuesday, April 28, 2026
spot_img

ನ.19ರಂದು ಕೋಟೇಶ್ವರದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ

ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಅವಿಭಜಿತ ಕುಂದಾಪುರ ತಾಲೂಕು ಸಹಕಾರ ನೌಕರರ ಒಕ್ಕೂಟ, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘ ನಿ., ಕೋಟೇಶ್ವರ ಇವರ ಜಂಟಿ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಕೋಟೇಶ್ವರದ ಕಮಲಮ್ಮ ಸರ್ವೋತ್ತಮ ಬುದ್ಧ ಕಲ್ಯಾಣ ಮಂಟಪದಲ್ಲಿ ನವಂಬರ್ 19ರಂದು ಆದಿತ್ಯವಾರ ಬೆಳಿಗ್ಗೆ 9.30ಕ್ಕೆ ನಡೆಯಲಿದೆ.

ಮಹಿಳೆಯರು, ಯುವಜನ ಮತ್ತು ಅಬಲವರ್ಗಕ್ಕೆ ಸಹಕಾರ ಸಂಘಗಳು ಕಾರ್ಯಕ್ರಮದ ವಿಷಯವಾಗಿದೆ. ಇದೇ ಸಂದರ್ಭದಲ್ಲಿ ಸಹಕಾರ ಸಂಘಗಳ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ನೆರವೇರಿಸಲಾಗುವುದು.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟನೆ ನೆರವೇರಿಸಲಿದ್ದಾರೆ.
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ರಾಜು ಪೂಜಾರಿ, ಎಂ.ಮಹೇಶ ಹೆಗ್ಡೆ, ದ.ಕ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಇದರ ನಿರ್ದೇಶಕರಾದ ಮಂಜುನಾಥ ಎಸ್.ಕೆ., ಕುಂದಾಪುರ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ ಭಾಗವಹಿಸಲಿದ್ದಾರೆ. ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ ಇದರ ನಿರ್ದೇಶಕರಾದ ಶ್ರೀಧರ ಪಿ.ಎಸ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!