spot_img
Tuesday, April 28, 2026
spot_img

ವರ್ಗಾವಣೆಗೂ ನನಗೂ ಸಂಬಂಧ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಮೈಸೂರು) : ವರ್ಗಾವಣೆ ದಂದೆಯಲ್ಲಿ ನಾನಾಗಲಿ ಅಥವಾ ನನ್ನ ತಂದೆಯಾಗಲಿ ತೊಡಗಿಲ್ಲ. ಒಬ್ಬ ಮುಖ್ಯಮಂತ್ರಿ ಮೇಲೆ ಆರೋಪ ಮಾಡಬೇಕಾದರೇ ಸಾಕ್ಷ್ಯ ಇಟ್ಟುಕೊಂಡು ಮಾತಾಡುವುದು ಮುಖ್ಯ. ಸಾಕ್ಷ್ಯವಿಲ್ಲದೇ ಎಷ್ಟೇ ಮಾತಾಡಿದರೂ ಅದು ಸತ್ಯವಾಗುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ಯತೀಂದ್ರ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ವರದಿಗಾರರೊಂದಿಗೆ ಇಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ವರ್ಗಾವಣೆಗೂ ನನಗೂ ಸಂಬಂಧ ಇಲ್ಲ. ವಿಪಕ್ಷಗಳು ಹತಾಶೆಯಿಂದ ಸುಖಾಸುಮ್ಮನೆ ಟೀಕೆ ಮಾಡುತ್ತಿವೆ. ಇನ್ಸ್‌ಪೆಕ್ಟರ್‌ ವಿವೇಕಾನಂದ ಯಾರೆಂದೇ ನನಗೆ ಗೊತ್ತಿಲ್ಲ. ಅಂತದರಲ್ಲಿ ಅವರನ್ನು ವರ್ಗಾವಣೆ ಮಾಡುವ ವಿಚಾರ ಎಲ್ಲಿ ಬಂತು ? ಎಂದು ಅವರು ಪ್ರಶ್ನೆ ಮಾಡಿದ್ದಲ್ಲದೇ. ಕುಮಾರ ಸ್ವಾಮಿ ಕೂಡ ಈ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರೂ ಕೂಡ ಅಧಿಕಾರದಲ್ಲಿದ್ದಾಗ ದಂದೆಯನ್ನೇ ಮಾಡುತ್ತಿದ್ದರಾ ? ಎಂದು ಕೇಳಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಫೋನ್‌ ಕಾಲ್‌ನಲ್ಲಿ ಮಾತನಾಡಿದ ಒಂದು ವೀಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಶೇರ್‌ ಮಾಡಿ ʼಸೂಪರ್‌ ಸಿಎಂʼ ಅಧಿಕಾರಿಗಳ ವರ್ಗಾವಣೆ ದಂದೆಯಲ್ಲಿ ತೊಡಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಆರೋಪಿಸಿದ್ದರು.  ಈ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಭಾರಿ ದೊಡ್ಡ ಚರ್ಚೆಯಾಗಿತ್ತು. ಈಗ ಈ ಸಂಬಂಧಿಸಿಂತೆ ಯತೀಂದ್ರ ಸಿದ್ದರಾಮಯ್ಯ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!