spot_img
Monday, April 27, 2026
spot_img

ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಉಗಮ-2023

ಕುಂದಾಪುರ: ಓದು ಹವ್ಯಾಸವಾದಾಗ ಭಿನ್ನ ಯೋಚನೆಗಳು ಸಾಧ್ಯ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಭೆಗಳಿಗೆ ಪ್ರಪುಲ್ಲವಾದ ಅವಕಾಶವಿದೆ. ತೆರೆದ ಕಣ್ಣಿನಿಂದ ನೋಡುವ ಮುಖೇನ ಪ್ರತಿಭೆಗೆ ಪ್ರೇರಣೆ ಸಾಧ್ಯ ಎಂದು ಚಿತ್ರದುರ್ಗದ ಇಂಡಿಯಾನಾ ಆಸ್ಪತ್ರೆ ಮತ್ತು ಹೃದಯ ಆರೋಗ್ಯ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ರೂಪೇಶ್ ಶೆಟ್ಟಿ ಹೇಳಿದರು.

ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಅಂತರ್-ಕಾಲೇಜು ಉಗಮ-೨೦೨೩ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ಪ್ರೀತಿ ಹೆಗ್ಡೆ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯದರ್ಶಿ ಸ್ಕಂದ ಎನ್. ಛಾತ್ರ, ಸ್ಟುಡೆಂಟ್ ಕ್ವಾಲಿಟಿ ಎಶ್ಯುರೆನ್ಸ್ ಸೆಲ್‌ನ ಕಾರ್ಯದರ್ಶಿ ಚೇತನ್ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ಹರೀಶ್ ಉದ್ಘಾಟಕರನ್ನು ಪರಿಚಯಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಶ್ರೀ ಹರೀಶ್ ಕಾಂಚನ್ ವಂದಿಸಿದರು. ಕನ್ನಡ ಪ್ರಾಧ್ಯಾಪಕಿ ಶ್ರೀಮತಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!