spot_img
Monday, April 27, 2026
spot_img

ಕುಂದಾಪುರ ಸರ್ಕಾರಿ ಆಸ್ಪತ್ರೆ : ನವಜಾತ ಶಿಶು ಸಾವು | ವೈದ್ಯರ ನಿರ್ಲಕ್ಷ್ಯ ಹೌದಾದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ : ಜಿಲ್ಲಾಧಿಕಾರಿ

ಜನಪ್ರತಿನಿಧಿ ವಾರ್ತೆ :  ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯ ಸಂದರ್ಭದಲ್ಲಿ ಮಗು ಮೃತ ಪಟ್ಟಿರುವ ಘಟನೆಗೆ ಸಂಬಂಧಿಸಿ, ಇದಕ್ಕೆ ವೈದ್ಯಾಧಿಕಾರಿಯ ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಆರೋಪಿಸಿ ಮೃತ ಮಗುವಿನ ಕುಟುಂಬ ಹಾಗೂ ಸಾರ್ವಜನಿಕರು ಆಸ್ಪತ್ರೆಯ ಎದುರು ಪ್ರತಿಭಟನೆ ನಿರತರಾಗಿದ್ದರು. ವೈದ್ಯಾಧಿಕಾರಿ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿದ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಪ್ರತಿಭಟನಾ ನಿರತರ ಮನವಿಯನ್ನು ಆಲಿಸಿದ್ದಾರೆ. ಘಟನೆ ಸಂಬಂಧ ಪರಿಶೀಲನೆ ನಡೆಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ಈ ಸಂದರ್ಭ ಮಾಧ್ಯಮ ವರದಿಗಾರರಿಗೆ ಪ್ರತಿಕ್ರಯಿಸಿದ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ,  ವೈದ್ಯರ ನಿರ್ಲ್ಯಕ್ಷ್ಯವಿದ್ದಲ್ಲಿ ಖಂಡಿತ ಆ ಬಗ್ಗೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ತಾತ್ಕಾಲಿಕವಾಗಿ ಯಾವುದೇ ಸಮಸ್ಯೆಯಾಗಬಾರದು ಎಂಬ ದೃಷ್ಟಿಯಿಂದ ವೈದ್ಯರನ್ನು ಬೇರೆ ಕಡೆ ವರ್ಗಾವಣೆ ಮಾಡುತ್ತೇವೆ. ಯಾವುದೇ ವೈದ್ಯರ ಮೇಲೆ ನಿಯಮಾನುಸಾರವನ್ನು ಮೀರಿ ಕ್ರಮ ತೆಗೆದುಕೊಳ್ಳುವುದಕ್ಕೆ ಸಾಧ್ಯವಿಲ್ಲ. ವೈದ್ಯರು ಈ ಸಂಬಂಧ ನಿರ್ಲ್ಯಕ್ಷ್ಯ ವಹಿಸಿದ್ದು ಸತ್ಯವೇ ಆಗಿದ್ದಲ್ಲಿ ಸರ್ಕಾರದ ಗಮನಕ್ಕೆ ತಂದು ಖಂಡಿತ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

ಸದ್ಯ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಉತ್ತಮ ಗೈನೆಕಾಲಾಜಿಸ್ಟ್‌ (ಸ್ತೀರೋಗ ತಜ್ಞ) ನೇಮಿಸುವ ಕೆಲಸವನ್ನು ಶೀಘ್ರವಾಗಿ ಮಾಡುತ್ತೇವೆ. ಪ್ರತಿಭಟನಾಕಾರರಿಗೂ ಈ ಮಾಹಿತಿಯನ್ನು ನೀಡಿದ್ದೇವೆ. ವೈದ್ಯಾಧಿಕಾರಿಗಳ ತಂಡ ಪ್ರಾಥಮಿಕವಾಗಿ ಈ ಸಂಬಂಧ ಪರಿಶೀಲನೆ ಮಾಡಿ ವರದಿ ನೀಡಬೇಕು. ವರದಿಯ ಅನ್ವಯ ನಿರ್ಲಕ್ಷ್ಯ ವಹಿಸಿದ್ದು ಕಂಡು ಬಂದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ವರದಿಗಾರರಿಗೆ ಪ್ರತಿಕ್ರಿಯಿಸಿ, ಪ್ರತಿಭಟನಾಕಾರರು ವೈದ್ಯಾಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ನಿಯಮದ ಅನ್ವಯ ಕಂಪ್ಲೆಂಟ್‌ನನ್ನು ಮೆಡಿಕಲ್‌ ಬೋರ್ಡ್‌ಗೆ ರೆಫರ್‌ ಮಾಡುತ್ತೇವೆ. ಮೆಡಿಕಲ್‌ ಬೋರ್ಡ್‌ ಕೊಡುವ ವರದಿಯ ಅನ್ವಯ ಕಾನೂನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.  

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!