spot_img
Monday, April 27, 2026
spot_img

ಬೆಸ್ಕಾಂ ತಂತಿ ಸ್ಪರ್ಶಿಸಿ ತಾಯಿ-ಮಗು ದುರಂತ ಸಾವು : ಸ್ವಯಂ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಕಾಡುಗೋಡಿ ಹೋಪ್‌ ಫಾರ್ಮ್‌ ಬಳಿಯ ವೈಟ್‌ ಫೀಲ್ಡ್‌ ಮುಖ್ಯ ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ಬೆಸ್ಕಾಂ ವಿದ್ಯುತ್‌ ತಂತಿ ತುಳಿದು ತಾಯಿ ಮತ್ತು ಮಗು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಪ್ರಾರಂಭಿಸಿದ್ದಾರೆ.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ ಬೆಂಗಳೂರು ಮಹಾನಗರ ಪ್ರದೇಶ ವ್ಯಾಪ್ತಿಯ ಮುಖ್ಯ ಇಂಜಿನಿಯರ್‌, ಪೂರ್ವ ವೃತ್ತದ ಸೂಪರಿಂಟೆಂಡಿಂಗ್‌ ಇಂಜಿನಿಯರ್‌, ವೈಟ್ ಫೀಲ್ಡ್‌ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌, ಇ-೪ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಹಾಗೂ ದುರ್ಘಟನೆ ಸಂಭವಿಸಿದ ಸ್ಥಳದ ವ್ಯಾಪ್ತಿಯ ಸಹಾಯಕ ಇಂಜಿಯರ್‌ಗೆ ಲೋಕಾಯುಕ್ತರು ನೋಟೀಸ್‌ ಜಾರಿ ಮಾಡಿದ್ದಾರೆ.

ವಿದ್ಯುತ್‌ ಮಾರ್ಗಗಳ ನಿರ್ವಹಣೆಯಲ್ಲಿ ಲೋಪದಿಂದಾಗಿ ದುರ್ಘಟನೆ ಸಂಭವಿಸಿರುವುದಕ್ಕೆ ಮೇಲ್ನೋಟಕ್ಕೆ ಸಾಕ್ಷ್ಯಗಳು ಕಂಡುಬರುತ್ತಿವೆ. ಇದನ್ನು ʼದುರಾಡಳಿತʼದ ವ್ಯಾಪ್ತಿಯಲ್ಲಿ ಪರಿಗಣಿಸಿ ವಿಚಾರಣೆ ಪ್ರಾರಂಭಿಸಲಾಗಿದೆ ಎಂದು ಲೋಕಾಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.  

ಪೊಲೀಸ್‌ ತನಿಖೆಗೆ ಆದೇಶ :

ಘಟನೆ ಸಂಬಂಧಿಸಿದಂತೆ ಲೋಕಾಯುಕ್ತರು ಪೊಲೀಸ್‌ ವಿಭಾಗದ ಬೆಂಗಳೂರು ನಗರ ಘಟಕದ ಎಸ್‌ಪಿ ಅವರಿಗೆ ಲೋಕಾಯುಕ್ತರು ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶನ ಕೊಟ್ಟಿದ್ದಾರೆ. ಘಟನೆ ಸಂಬಂಧಿಸಿದಂತೆ ವಿಚಾರಣೆಯು ಡಿಸೆಂಬರ್‌ 8ಕ್ಕೆ ನಿಗದಿಯಾಗಿದ್ದು, ಅಷ್ಟರೊಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಪ್ರತಿವಾದೊಗಳಿಗೆ ಗಡುವು ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!