spot_img
Monday, April 27, 2026
spot_img

ಎನ್‌ಕೌಂಟರ್‌ನಲ್ಲಿ ಕನ್ನಡಿಗ ಯೋಧ ಹುತಾತ್ಮ | ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲ : ಕಾಂಗ್ರೆಸ್‌

ಜನಪ್ರತಿನಿಧಿ ವಾರ್ತೆ : ಜಮ್ಮು ಮತ್ತು ಕಾಶ್ಮೀರದಲ್ಲಿ ನಿನ್ನೆ ( ಬುಧವಾರ) ಸೇನೆ ಹಾಗೂ ಉಗ್ರಗಾಮಿಗಳ ನಡುವೆ ನಡೆಸಿದ ಎನ್‌ಕೌಂಟರ್‌ ನಲ್ಲಿ ಕರ್ನಾಟಕದ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ (28 ವ) ಒಳಗೊಂಡು ನಾಲ್ವರು ಹುತಾತ್ಮರಾಗಿದ್ದಾರೆ.

ಮಂಗಳೂರಿನ ಎಂಆರ್‌ಪಿ ಎಲ್‌ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ಎಂ. ವೆಂಕಟೇಶ್‌ ಹಾಗೂ ಅನುರಾಧಾ ದಂಪತಿಗಳ ಏಕೈಕ ಪುತ್ರ ಪ್ರಾಂಜಲ್‌ ಹುತಾತ್ಮರಾಗಿದ್ದಾರೆ.

ಎರಡು ವರ್ಷಗಳ ಹಿಂದಷ್ಟೆ ಪ್ರಾಂಜಲ್‌ ಅವರ ವಿವಾಹ ನೆರವೇರಿದ್ದು, ಅವರ ಪತ್ನಿ ಚೆನ್ನೈ ಐಐಟಿಯಲ್ಲಿ ಎಂಟೆಕ್‌ ಮಾಡುತ್ತಿದ್ದಾರೆ. ಈ ಸುದ್ದಿ ಪ್ರಾಂಜಲ್‌ ಕುಟುಂಬ ಹಾಗೂ ಅವರ ಕುಟುಂಬವನ್ನು ದಿಗ್ಭ್ರಮೆಗೊಳಿಸಿದೆ.

ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಪ್ರಾಂಜಲ್, ಎಂಆರ್‌ಪಿಎಲ್‌ ಡೆಲ್ಲಿ ಸ್ಕೂಲ್‌ನಲ್ಲಿ ಎಲ್‌ಕೆಜಿಯಿಂದ 10ನೇ ತರಗತಿ ತನಕ ಶಿಕ್ಷಣ ಪಡೆದಿದ್ದರು. ಬಳಿಕ ಮಹೇಶ್‌ ಕಾಲೇಜಿನಲ್ಲಿ ಪಿಯುಸಿ ಪೂರೈಸಿ, ನಂತರ ಮಧ್ಯಪ್ರದೇಶದ ಮಿಲಿಟರಿ ಕಾಲೇಜ್‌ ಆಫ್‌ ಟೆಲಿಕಮ್ಯುನಿಕೇಶನ್‌ ಎಂಜಿನಿಯರಿಂಗ್‌ನಲ್ಲಿ ಶಿಕ್ಷಣ ಪಡೆದು, ನೇರವಾಗಿ ಭಾರತೀಯ ಸೇನೆ ಸೇರಿದ್ದರು.

ರಾಜ್ಯ ಕಾಂಗ್ರೆಸ್‌ ಸಂತಾಪ : ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕರ್ನಾಟಕದ ವೀರಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ರವರಿಗೆ ನಮನಗಳು. ಈ ಘಟನೆಯಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದು ಅವರೆಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಸಂತಾಪ ಸೂಚಿಸಿದೆ.

ಮಾತ್ರವಲ್ಲದೇ, ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾದ ಪರಿಣಾಮ ಯೋಧರು ಜೀವ ತೆರುತ್ತಲೇ ಇದ್ದಾರೆ. ಕೇಂದ್ರ ಸರ್ಕಾರ ಭಯೋತ್ಪಾದಕ ಚಟುವಟಿಕೆಗಳನ್ನು ಮುಚ್ಚಿಟ್ಟು ಮರ್ಯಾದೆ ಕಾಪಾಡಿಕೊಳ್ಳಲು ಯತ್ನಿಸುವ ಬದಲು ಪ್ರಾಮಾಣಿಕ ಕೆಲಸಗಳನ್ನು ಮಾಡಲಿ ಎಂದು ಹೇಳಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!