spot_img
Monday, April 27, 2026
spot_img

ಜಾತಿ ಗಣತಿಯ ಮೂಲ ಪ್ರತಿ ಕಳವಾಗಿರುವ ಬಗ್ಗೆ ಸರ್ಕಾರ ಶೀಘ್ರ ತನಿಖೆ ನಡೆಸಲಿ : ಆರ್.‌ ಅಶೋಕ್‌ ಒತ್ತಾಯ

ಜನಪ್ರತಿನಿಧಿ ವಾರ್ತೆ : ಜಾತಿ ಗಣತಿಯ ಮೂಲ ಪ್ರತಿ ಕಳವಾಗಿರುವ ಹಿಂದೆ ಕಾಂಗ್ರೆಸ್ ಸರ್ಕಾರದ ಕೈವಾಡ ಇದೆ ಎಂದು ಬಿಜೆಪಿ ವಿರೋಧ ಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ.

ವಿಧಾನಸೌಧದ ವಿರೋಧ ಪಕ್ಷದ ನಾಯಕನ ನೂತನ ಕಚೇರಿಯ ಪೂಜೆ ಬಳಿಕ ವರದಿಗಾರರಿಗೆ ಸ್ಪಂದಿಸಿದ ಅವರು,‌ ಕಾಂತರಾಜು ವರದಿ ಗೊಂದಲಕ್ಕೆ ಕಾರಣವಾಗಿದೆ. ಕಾಂತರಾಜು ವರದಿ ಘೋಷಣೆ ಮಾಡುವಾಗ ಸಮಿತಿ ಮಾಡದೆ ಏಕಾ ಏಕಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಹತ್ತು ವರ್ಷ ಹಳೆದ ವರದಿ‌. ಜನಸಂಖ್ಯೆ ಬದಲಾವಣೆ ಆಗಿದೆ. ನಮ್ಮ ಮನೆಗೆ ಬಂದಿಲ್ಲ ಎಂದು ಸಾರ್ವಜನಿಕರಿಂದ ದೂರು ಇದೆ. ಕಾಂತರಾಜು ವರದಿಗೆ ಮೆಂಬರ್ ಸೆಕ್ರೆಟರಿ ಸಹಿ ಹಾಕಿಲ್ಲ. ಅಲ್ಲದೆ ವರದಿಯ ಮೂಲ ಪ್ರತಿ ಕಾಣೆಯಾಗಿದೆ ಎಂದಿದ್ದಾರೆ.

168 ಕೋಟಿ ಸರ್ಕಾರದ ಹಣ ಖರ್ಚು ಮಾಡಿದ ವರದಿ ಮೂಲ ಪ್ರತಿ ಕಾಣೆಯಾಗಿದೆ ಎಂದರೆ ಸರ್ಕಾರ ಏಕೆ ತನಿಖೆ ಮಾಡಿಲ್ಲ? ಇದರ ಬಗ್ಗೆ ಚಕಾರ ಎತ್ತುತ್ತಿಲ್ಲ. ಸರ್ಕಾರ ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ. ಯಾರನ್ನೋ ಕಾಪಾಡುವ ಕೆಲಸ ಮಾಡುತ್ತಿದೆ. ಈ ಬಗ್ಗೆ ಸರ್ಕಾರ ಮೀನಮೇಷ ಎಣಿಸದೇ ಕಳ್ಳತನದ ಬಗ್ಗೆ ಶೀಘ್ರವಾಗಿ ತನಿಖೆ ನಡೆಸಲಿ ಎಂದು ಅವರು ಒತ್ತಾಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!