spot_img
Monday, April 27, 2026
spot_img

ಬ್ರಹ್ಮಾವರ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಜಾಮೀನು ಅರ್ಜಿ ತಿರಸ್ಕೃತ

ಬ್ರಹ್ಮಾವರ, ನ.23: ಬ್ರಹ್ಮಾವರ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ನ.23ರಂದು ಅರ್ಜಿ ಕೈಗೆತ್ತಿಕೊಂಡ ಉಡುಪಿ ಸೆಷನ್ಸ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿದೆ.

ದ.ಕ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಇದರ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ದ ತನಿಖೆ ನೆಡೆಸುವಂತೆ ಉಡುಪಿ ಜಿಲ್ಲಾ ರೈತ ಸಂಘ ಖಾಸಗಿ ದೂರನ್ನು ಆಡಿಷಲ್ ಸಿವಿಲ್ ಜಡ್ಜ್ ಉಡುಪಿಯಲ್ಲಿ ದಾಖಲು ಮಾಡಿದ್ದು, ಈ ದೂರು ದಿನಾಂಕ 21/10/2023ರಂದು ವಿಚಾರಣೆ ನಡೆಸಿದ ನ್ಯಾಯದೀಶರು ಈ ವಂಚನೆ ಕುರಿತು ಸೂಕ್ತ ತನಿಖೆ ಮಾಡಿ 12/12/2023ರ ಒಳಗೆ ನ್ಯಾಯಾಲಯಕ್ಕೆ ವರದಿ ನೀಡಲು ಬ್ರಹ್ಮಾವರ ಪೊಲೀಸ್ ಠಾಣೆಗೆ ಆದೇಶ ಮಾಡಿದ್ದರು.

ಆಡಳಿತ ಮಂಡಳಿ ಅಧ್ಯಕ್ಷ ಸುಪ್ರಸಾದ್ ಶೆಟ್ಟಿ, ಅಂದಿನ ಆಡಳಿತ ನಿರ್ದೇಶಕರಾದ ಪ್ರವೀಣ್ ನಾಯಕ್, ಲಕ್ಷ್ಮೀನಾರಾಯಣ, ಉಪಾಧ್ಯಕ್ಷ ಉಮಾನಾಥ ಶೆಟ್ಟಿ, ಆಡಳಿತ ಮಂಡಳಿ ನಿರ್ದೇಶಕರು ಸೇರಿದಂತೆ ಭಾಗಿಯಾದ ೨೫ ಜನರ ಮೇಲೆ ಮೊಕದ್ದಮೆ ದಾಖಲಿಸಲಾಗಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!