spot_img
Sunday, April 26, 2026
spot_img

ಉಡುಪಿ ಜಿಲ್ಲಾ ಸಮ್ಮೇಳನಾಧ್ಯಕ್ಷರಾಗಿ ಬಾಬುಶಿವ ಪೂಜಾರಿ

ಕೋಟ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಸಾರಥ್ಯದಲ್ಲಿ ನಡೆಯುವ ಉಡುಪಿ ಜಿಲ್ಲಾ 16ನೇ ಸಾಹಿತ್ಯ ಸಮ್ಮೇಳನ ಅನುಸಂಧಾನ-2023 (ಭಾಷೆಗೂ ಮೀರಿದ ಭಾವನೆ) ಅಧ್ಯಕ್ಷರಾಗಿ ಸಾಹಿತಿ-ಸಂಶೋಧಕ ಬಾಬು ಶಿವಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಹೋಟೆಲ್ ಉದ್ಯಮಿಯಾಗಿರುವ ಬಾಬು ಶಿವಪೂಜಾರಿ ಅವರು ವೇದ, ಆಧುನಿಕ ಸಾಹಿತ್ಯ, ಬೌದ್ಧ, ಜೈನ,ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮ ಗ್ರಂಥಗಳನ್ನು ಆಳವಾಗಿ ಅಭ್ಯಸಿಸಿದ್ದಾರೆ. ನಾರಾಯಣ ಗುರುಗಳು ಆದರ್ಶ, ನಾರಾಯಣ ಗುರು ವಿಜಯ ದರ್ಶನ, ಅನುಸಂಧಾನ, ಹಗ್ಗಿನ ಹನಿ ಮುಂತಾದವು ಇವರ ಕೃತಿಗಳು. ಶ್ರೀಕೃಷ್ಣ ದೇವರಾಯ, ಕೋಟಿ ಚೆನ್ನಯ್ಯ, ತುಳು ಸಂಸ್ಕೃತಿ, ಕಾಂತಬಾರೆ ಬೂದಬಾರೆ,ಸಿರಿ,ನಾಗಾರಾಧನೆ, ಭೂತಾರಾಧನೆ ಮತ್ತು ತುಳುನಾಡಿನ ಗರಡಿಗಳ ಬಗ್ಗೆ ಸಂಶೋಧನಾತ್ಮಕ ಫ್ರೌಡ ಲೇಖನಗಳನ್ನು ಪ್ರಕಟಿಸಿದ್ದಾರೆ. ನಾರಾಯಣ ಗುರು ವಿಜಯ ದರ್ಶನವು ಆಧ್ಯಾತ್ಮ ಮತ್ತು ಸಾಮಾಜಿಕ ನೆಲೆಯಲ್ಲಿ ನೆಲದ ಸಂಕಟ ಮತ್ತು ಆಶೋತ್ತರಗಳನ್ನು ತೆರೆದಿಟ್ಟ ಕೃತಿ.

ಕೋಟದ ವಿವೇಕ ವಿದ್ಯಾಲಯದ ಆವರಣದಲ್ಲಿ ಡಿಸೆಂಬರ್ 5 ಮತ್ತು 6 ರಂದು ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಸಾಹಿತ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲೆಯ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಮತ್ತು ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ ಹಾಗೂ ನರೇಂದ್ರ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!