spot_img
Monday, April 27, 2026
spot_img

ಕಾನೂನಿನ ಪರಿಧಿಯಲ್ಲಿ ಏನು ಮಾಡುವುದಕ್ಕೆ ಸಾಧ್ಯವಿದೆಯೋ ಅದನ್ನು ಮಾಡಿದ್ದೇವೆ : ಪರಮೇಶ್ವರ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಆದಾಯ ಮೀರಿದ ಆಸ್ತಿ ಗಳಿಕೆಯ ಆರೋಪಕ್ಕೆ ಸಂಬಂಧಿಸಿದಂತೆ  ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ವಿರುದ್ದ ಸಿಬಿಐ ತನಿಖೆಗೆ ಅನುಮತಿ ನೀಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ವಾಪಾಸ್‌ ತೆಗೆದುಕೊಂಡಿದೆ.

ಈ ಬಗ್ಗೆ ಮಾಧ್ಯಮ ವರದಿಗಾರರಿಗೆ ಸ್ಪಂದಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ, ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವನ್ನು ನ್ಯಾಯಾಲಯಕ್ಕೆ ಒಪ್ಪಿಸುತ್ತೇವೆ. ಕಾನೂನಿನ ಪರಿಧಿಯಲ್ಲಿ ಏನು ಮಾಡುವುದಕ್ಕೆ ಸಾಧ್ಯವಿದೆಯೋ ಅದನ್ನು ಮಾಡಿದ್ದೇವೆ. ಸಿಬಿಐ ನ್ಯಾಯಾಲಯ ಏನು ಮಾಡುತ್ತದೆ ಎನ್ನುವುದನ್ನು ಕಾದು ನೋಡಬೇಕು. ಪ್ರತಿಪಕ್ಷಗಳ ನಾಯಕರ (ಬಿಜೆಪಿ ಮತ್ತು ಜೆಡಿಎಸ್) ವ್ಯಾಖ್ಯಾನಾವರವರಿಗೆ ಬಿಟ್ಟಿದ್ದು ಎಂದು ಅವರು ಹೇಳಿದ್ದಾರೆ.

ಇನ್ನು, ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಡಿಸಿಎಂ ಡಿ. ಕೆ ಶಿವಕುಮಾರ್‌, ಬಿಜೆಪಿ ಸರ್ಕಾರ ನನ್ನ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸಚಿವ ಸಂಪುಟ ವಾಪಾಸ್‌ ಪಡೆದಿರುವುದನ್ನು ಪತ್ರಿಕೆಗಳಲ್ಲಿ ನೋಡಿದ್ದೇನೆ. ತೆಲಂಗಾಣಕ್ಕೆ ಚುನಾವಣಾ ಪ್ರಚಾರಕ್ಕಾಗಿ ಹೋಗಿದ್ದೇನೆ. ಹಾಗಾಗಿ ಸಚಿವ ಸಂಪುಟ ಸಭೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!