spot_img
Monday, April 27, 2026
spot_img

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಪದ್ಮಶ್ರೀ ಹಾಜಬ್ಬರಿಗೆ ಗೌರವ : ಏರ್‌ ಇಂಡಿಯಾ ಸಿಬ್ಬಂದಿಗಳ ಗೌರವ ಜಾಲತಾಣಗಳಲ್ಲಿ ವೈರಲ್‌

ಜನಪ್ರತಿನಿಧಿ ವಾರ್ತೆ : ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಸಿಬ್ಬಂದಿಗಳು ಅಭಿನಂದಿಸಿ ಗೌರವಿಸಿದ್ದಾರೆ.

ಹಿದಾಯ ಫೌಂಡೇಶನ್‌ ಜುಬೈಲ್‌ ಘಟಕದ ಆಶ್ರಯದಲ್ಲಿ ದುಬೈನಲ್ಲಿ ಆಯೋಜಿಸಾಲಗುತ್ತಿರುವ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ನಲ್ಲಿ ತೆರಳುತ್ತಿದ್ದ ಹಾಜಬ್ಬರನ್ನು ಅಲ್ಲಿನ ಸಿಬ್ಬಂದಿಗಳು ಗೌರವಿಸಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾಜಬ್ಬ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌ ವಿಮಾನದಲ್ಲಿ ದಮ್ಮಾಯ್‌ ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರನ್ನು ಗುರುತಿಸಿ ಏರ್‌ ಇಂಡಿಯಾ ವಿಮಾನದ ಸಿಬ್ಬಂದಿ ಓರ್ವರು ಕ್ಯಾಪ್ಟನ್‌ ಗಮನಕ್ಕೆ ತಂದರು. ಕ್ಯಾಪ್ಟನ್‌ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಇತರೆ ಪ್ರಯಾಣಿಕರಿಗೆ ಪರಿಚಯ ಮಾಡಿಕೊಟ್ಟಿದ್ದಾರೆ.

“ಶಿಕ್ಷಣ ಕ್ಷೇತ್ರದಲ್ಲಿ ಅಸಾಮಾನ್ಯ ಸೇವೆ ಸಲ್ಲಿಸಿ ದೇಶದ ಅತ್ಯುನ್ನತ ಗೌರವ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣ ಬೆಳೆಸುತ್ತಿರುವುದು ನಮಗೆಲ್ಲಾ ಹೆಮ್ಮೆಯ ವಿಚಾರ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು” ಎಂದು ಹೇಳಿ ಗೌರವಿಸಿದ್ದಾರೆ. ಕ್ಯಾಪ್ಟನ್‌ ಹೀಗೆ ಅವರನ್ನು ಗೌರವಿಸುತ್ತಿರುವಾಗ ಹಾಜಬ್ಬ ಭಾವುಕರಾದರು. ಹಾಜಬ್ಬ ಭಾವುಕರಾದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಈ ಕ್ಷಣವನ್ನು ಸಹಪ್ರಯಾಣಿಕರೊಬ್ಬರು ಚಿತ್ರೀಕರಿಸಿದ್ದಾರೆ. ಹಾಜಬ್ಬ ಎಂದಿನಂತೆ ಸರಳತೆಯಿಂದ ಕೈಮುಗಿದು ಭಾವುಕರಾದರು. ನಂತರ ವಿಮಾನ ಸಿಬ್ಬಂದಿಗಳೊಂದಿಗೆ ನಿಂತು ಫೋಟೋಗೆ ಪೋಸ್‌ ಕೊಟ್ಟಿದ್ದಾರೆ.   

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!