spot_img
Monday, April 27, 2026
spot_img

ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : FIR ದಾಖಲಾಗದೆ ತುರಾತುರಿಯಲ್ಲಿ ಸಿಬಿಐಗೆ ವಹಿಸಿದ್ದು ಸಂವಿಧಾನ ವಿರೋಧಿ ನಡೆ ಅಲ್ಲವೇ? : ಕಾಂಗ್ರೆಸ್‌ ತಿರುಗೇಟು

ಜನಪ್ರತಿನಿಧಿ ವಾರ್ತೆ :  ಆದಾಯ ಮೀರಿದ ಆಸ್ತಿ ಗಳಿಕೆಯ ಆರೋಪಕ್ಕೆ ಸಂಬಂಧಿಸಿದಂತೆ  ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ವಿರುದ್ದ ಸಿಬಿಐ ತನಿಖೆಗೆ ಅನುಮತಿ ನೀಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರಾಜ್ಯ ಸಚಿವ ಸಂಪುಟ ವಾಪಾಸ್‌ ಪಡೆಯಲು ತೀರ್ಮಾನ ಮಾಡಿದೆ.

ಈ ಸಂಬಂಧಿಸಿದಂತೆ ರಾಜ್ಯ ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಸಿಬಿಐ ತನಿಖೆಗೆ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕಾನೂನು ಎಲ್ಲರಿಗೂ ಒಂದೇ, ಪ್ರಕರಣದ ವಿಚಾರಣೆ ಅಂತಿಮ ಹಂತ ತಲುಪಿದ್ದು, ತೀರ್ಪು ಬರುವ ಮೊದಲೇ ಅಧಿಕಾರ ದುರ್ಬಳಕೆ ಮಾಡಿ ಕೇಸು ಮುಚ್ಚಿ ಹಾಕುವ ಪ್ರಯತ್ನ ಒಳ್ಳೆಯದಲ್ಲ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ನಾಯಕ ಈಶ್ವರಪ್ಪ, ಡಾ. ಸಿ.ಎನ್‌ ಅಶ್ವಥ್‌ ನಾರಾಯಣ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಕುಟುಕಿದೆ.

ಇದಕ್ಕೆ ತಿರುಗೇಟು ನೀಡಿದ ರಾಜ್ಯ ಕಾಂಗ್ರೆಸ್‌, ಹಿಂದೆ ಬಿಜೆಪಿ ಸರ್ಕಾರ ಡಿ.ಕೆ ಶಿವಕುಮಾರ್ ಅವರ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು ದ್ವೇಷದ ಆಧಾರದ ಮೇಲೆಯೇ ಹೊರತು ಕಾನೂನಿನ ಆಧಾರದ ಮೇಲಲ್ಲ.

FIR ದಾಖಲಾಗದೆ, ಅಡ್ವಕೇಟ್ ಜನರಲ್ ಅವರ ಅಭಿಪ್ರಾಯ ಪಡೆಯದೆ, ಸ್ಪೀಕರ್ ಅನುಮತಿ ಇಲ್ಲದೆ ತುರಾತುರಿಯಲ್ಲಿ ಸಿಬಿಐಗೆ ವಹಿಸಿದ್ದು ಸಂವಿಧಾನ ವಿರೋಧಿ ನಡೆ ಅಲ್ಲವೇ?  ರಾಜಕೀಯ ದ್ವೇಷಕ್ಕಾಗಿ ಕಾನೂನು ಉಲ್ಲಂಘಿಸಿದ್ದರ ಬಗ್ಗೆ ಉತ್ತರಿಸುವ ಧೈರ್ಯ ಬಿಜೆಪಿಗರಿಗೆ ಇದೆಯೇ? ಎಂದು ರಾಜ್ಯ ಬಿಜೆಪಿಯನ್ನು ಪ್ರಶ್ನಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!