Sunday, September 8, 2024

ಭಾಗವತ ಸುರೇಶ್ ರಾವ್ ಬಾರ್ಕೂರು ಅವರಿಗೆ ‘ಕಾಳಿಂಗ ನಾವಡ ಪ್ರಶಸ್ತಿ’

ಕುಂದಾಪುರ: ಯಕ್ಷಲೋಕದ ಗಾನದೇವತೆಯ ಕಾಳಿಂಗ ನಾವಡರ ನೆನಪಿನಲ್ಲಿ ಬೆಂಗಳೂರಿನ ಪ್ರತಿಷ್ಟಿತ ಸಾಂಸ್ಕೃತಿಕ ಸಂಸ್ಥೆಯಾದ ಕಲಾ ಕದಂಬ ಆರ್ಟ್ ಸೆಂಟರ್ ಪ್ರತೀ ವರ್ಷ ಯಕ್ಷಗಾನದ ಸಾಧಕರೊಬ್ಬರಿಗೆ ಕಾಳಿಂಗ ನಾವಡ ಪ್ರಶಸ್ತಿ ನೀಡುತ್ತಿದ್ದು ಈ ಬಾರಿಯ ಪ್ರಶಸ್ತಿಗೆ ಪ್ರಸಿದ್ಧ ಭಾಗವರು, ಪ್ರಸಂಗಕರ್ತರು ಆದ ಸುರೇಶ್ ರಾವ್ ಬಾರ್ಕೂರು ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಹತ್ತು ಸಾವಿರ ನಗದು, ಬೆಳ್ಳಿ ತಟ್ಟೆ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಕಾಳಿಂಗ ನಾವಡ ಪ್ರಶಸ್ತಿ ಒಳಗೊಂಡಿರುತ್ತದೆ. ಗುಂಡ್ಮಿ ಸದಾನಂದ ಐತಾಳ್, ಸುಬ್ರಹ್ಮಣ್ಯ ಧಾರೇಶ್ವರ್, ಕೆಪ್ಪೆಕೆರೆ ಸುಬ್ರಾಯ ಹೆಗಡೆ, ಎಳ್ಳಾರೆ ವೆಂಕಟ್ರಾಯ ನಾಯಕ್, ನೆಬ್ಬೂರು ನಾರಾಯಣ ಹೆಗಡೆ, ಕರ್ಕಿ ಪ್ರಭಾಕರ ಭಂಡಾರಿ, ಕೆ.ಪಿ ಹೆಗ್ಡೆ, ಟಿ ಜಯಂತ್ ಕುಮಾರ್, ಮಂದಾರ್ತಿ ರಾಮಕೃಷ್ಣ, ಶ್ರೀಧರ ಹೆಬ್ಬಾರ್, ಗೋವಿಂದ ಉರಾಳ ಹಾಗೂ ಶಂಕರ ಭಾಗವತ ಯಲ್ಲಾಪುರ ಹಾಗೂ ಬಿದ್ಕಲ್‌ಕಟ್ಟೆ ಕೃಷ್ಣಯ್ಯ ಆಚಾರ್ಯ ಅವರು ಈಗಾಗಲೇ ಕಾಳಿಂಗ ನಾವಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ಸಾಲಿನ ಕಾಳಿಂಗ ನಾವಡ ಪ್ರಶಸ್ತಿ ಯನ್ನು ಸುಮಾರು 25 ವರ್ಷಗಳಿಂದ ಹೂವಿನ ಕೋಲಿನ ಸಂಪ್ರದಾಯವನ್ನು ನಡೆಸಿ ಕೊಂಡು ಬರುತ್ತಿರುವ ಹಲವಾರು ಯಕ್ಷಗಾನ ಮೇಳಗಳಲ್ಲಿ ತಮ್ಮ ಭಾಗವತಿಕೆಯ ಮೂಲಕ ಖ್ಯಾತ ಭಾಗವತರು ಎನಿಸಿಕೊಂಡಿರುವ ಹಾಗೂ ಪ್ರಸಂಗಕರ್ತರು ಆದ ಸುರೇಶ್ ರಾವ್ ಬಾರ್ಕೂರು ಅವರಿಗೆ, ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟ ಹಂದಟ್ಟು ಗ್ರಾಮದ ಉರಾಳ ಕೇರಿಯ ವೇದಿಕೆಯಲ್ಲಿ 25-12-2023 ರ ಸಂಜೆ 6 ಘಂಟೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ನೀಡಲಾಗುವುದೆಂದು ಕಲಾಕದಂಬ ಆರ್ಟ್ ಸೆಂಟರ್ ನ ನಿರ್ದೇಶಕರಾದ ಡಾ.ರಾಧಾಕೃಷ್ಣ ಉರಾಳರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!