spot_img
Monday, April 27, 2026
spot_img

ಹೆಸಕುತ್ತೂರು ಸ.ಹಿ.ಪ್ರಾ ಶಾಲೆಯಲ್ಲಿ ವಿವೇಕ ತರಗತಿಗಳ ಉದ್ಘಾಟನೆ

ಕುಂದಾಪುರ: ಕನ್ನಡ ಮಾಧ್ಯಮ ಸರಕಾರಿ ಶಾಲೆಯಾಗಿದ್ದುಕೊಂಡು ಅತ್ಯುತ್ತಮ ಶೈಕ್ಷಣಿಕ ವ್ಯವಸ್ಥೆ, ಗುಣಮಟ್ಟದ ಶಿಕ್ಷಣದ ಮೂಲಕ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿರುವ ಹೆಸಕುತ್ತೂರು ಪ್ರಾಥಮಿಕ ಶಾಲೆ ಇತರೆ ಶಾಲೆಗಳಿಗೆ ಮಾದರಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಎ ಕಿರಣಕುಮಾರ್ ಕೊಡ್ಗಿ ನುಡಿದರು. ಅವರು ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೂರು ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕ್ರಷ್ಣ ಕೆದ್ಲಾಯ ವಹಿಸಿದ್ದರು.

ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಪೋಷಕರನ್ನು ಅವರ ಮಕ್ಕಳೊಂದಿಗೆ ವೇದಿಕೆಗೆ ಆಹ್ವಾನಿಸಿ ವಿಶೇಷವಾಗಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೊರ್ಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮಾ ಎಲ್ ಶೆಟ್ಟಿ, ಕೊರ್ಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪಲ್ಲವಿ ಕುಲಾಲ, ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ, ಅಶೋಕ ಮೊಗವೀರ, ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಶೆಟ್ಟಿ ಕೆ ಎನ್, ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ನೌಕರರಾದ ಸಂಜೀವ ಕುಲಾಲ ಉಪಸ್ಥಿತರಿದ್ದರು. ಸಹಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ, ವಿಜಯಾ ಆರ್, ವಿಜಯ ಶೆಟ್ಟಿ, ರವೀಂದ್ರ ನಾಯಕ್, ಸ್ವಾತಿ ಬಿ., ಗೌರವ ಶಿಕ್ಷಕಿ ಮಧುರ, ಎಸ್ ಡಿ ಎಂ ಸಿ ಸದಸ್ಯರು, ಹಳೆವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ ಸ್ವಾಗತಿಸಿದರು. ಹುಣಸೆಮಕ್ಕಿ ಸಮೂಹ ಸಂಪನ್ಮೂಲ ಕೇಂದ್ರದ ಸಮೂಹ ಸಂಪನ್ಮೂಲ ವ್ಯಕ್ತಿ ವಸಂತ ಬಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷರಾದ ಜಯರಾಮ ಶೆಟ್ಟಿ ವಂದಿಸಿದರು ಹಾಗೂ ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!