spot_img
Monday, April 27, 2026
spot_img

ಕ.ಸಾ.ಪ ಕುಂದಾಪುರ ತಾಲೂಕು ಘಟಕ: ಯಕ್ಷಗಾನ ಪ್ರದರ್ಶನ

ಕುಂದಾಪುರ: ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ ಆಶ್ರಯದಲ್ಲಿ ಯಕ್ಷಗಾನ ಪ್ರದರ್ಶನವು ಕುಂದಾಪುರದ ಕಲಾಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯಕ್ಷ ಗುರು ಪ್ರಸಾದ್ ಕುಮಾರ್ ಮೊಗೆಬೆಟ್ಟು ಇವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಕ.ಸಾ.ಪ.ದ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಕುಂದಾಪುರದ ಖ್ಯಾತ ವಕೀಲರಾದ ಎ .ಎಸ್ .ಎನ್. ಹೆಬ್ಬಾರ್, ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಉಮೇಶ್ ಪುತ್ರನ್, ಉಡುಪಿ ಜಿಲ್ಲಾ ಕ.ಸಾ.ಪ. ಪ್ರಧಾನ ಕಾರ್ಯದರ್ಶಿಗಳಾದ ಸುಬ್ರಮಣ್ಯ ಶೆಟ್ಟಿ ಮುಂದಾದವರು ಉಪಸ್ಥಿತರಿದ್ದು ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿ ಯಕ್ಷಗಾನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು .

ಕುಂದಾಪುರ ಗೌರವ ಕಾರ್ಯದರ್ಶಿ ದಿನಕರ್ ಆರ್ ಶೆಟ್ಟಿ ಸ್ವಾಗತಿಸಿ ಕೋಶಾಧ್ಯಕ್ಷರಾದ ಮಂಜುನಾಥ್ ಕೆ .ಎಸ್ .ಸನ್ಮಾನ ಪತ್ರ ವಾಚಿಸಿದರು. ಸ್ವರ್ಣ ನೂಪುರ ಯಕ್ಷಗಾನ ಮಂಡಳಿ ಕುಂದಾಪುರದ ಸಂಯೋಜಕರಾದ ಗಣೇಶ್ ಗುನಗ ಉಪಸ್ಥಿತರಿದ್ದರು.

ದಿವಾಕರ್ ಶೆಟ್ಟಿ ವಂದಿಸಿದರು. ಕಸಾಪ ಗೌರವ ಕಾರ್ಯದರ್ಶಿ ಅಕ್ಷತಾ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸ್ವರ್ಣ ನೂಪುರ ಯಕ್ಷಗಾನ ಮಂಡಳಿಯವರಿಂದ ಅಮರಪಾರ್ಥಿ ಯಕ್ಷಗಾನ ಪ್ರದರ್ಶನ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!