spot_img
Monday, April 27, 2026
spot_img

ನರೆಗಾ ಉದ್ಯೋಗ ಮಿತಿ ಹೆಚ್ಚಿಸಲು ಕೇಂದ್ರ ನಕಾರ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ : ಬರ ಪರಿಹಾರ ಕಾಮಗಾರಿಗಳನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತಿದೆ. ಆದರೇ, ಕೇಂದ್ರ ಸರ್ಕಾರ ತನ್ನ ಪಾಲಿನ ಅನುದಾನವನ್ನು ಈವರೆಗೆ ಬಿಡುಗಡೆ ಮಾಡಿಲ್ಲ. ಇದುವರೆಗೆ ನಯಾ ಪೈಸೆ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ವರದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬರಗಾಲ ಸಮಯದಲ್ಲಿ ನರೇಗಾ ಯೋಜನೆಯಡಿ 150 ದಿನಗಳ ತನಕ ಕೆಲಸ ಕೊಡಬೇಕೆನ್ನುವ ನಿಯಮವಿದ್ದರೂ ಕೇಂದ್ರ ಸರ್ಕಾರ ದುಡಿಮೆಯ ದಿನ ಹೆಚ್ಚಿಸಲು ಅನುಮತಿ ನೀಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯತದಲ್ಲದಷ್ಟೇ ಅಲ್ಲದೇ, ದೇಶದ 12 ರಾಜ್ಯಗಳಲ್ಲಿ ಬರಗಾಲ ಆವರಿಸಿದೆ. ಇಂತಹ ಸಂದರ್ಭದಲ್ಲಿ ದುಡಿಯು ಜನರಿಗೆ ಹೆಚ್ಚಿನ ದುಡಿಯುವ ಜನರಿಗೆ ದುಡಿಯುವ ಅವಕಾಶಗಳನ್ನು ನೀಡಬೇಕಾಗಿದೆ. ನರೇಗಾ ಯೋಜನೆಯಡಿಯಲ್ಲಿ ಈಗ ನೀಡಲಾಲಾಗುತ್ತಿರುವ 100 ದಿನಗಳ ಉದ್ಯೋಗವನ್ನು 150 ದಿನಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಆದರೇ, ಕೇಂದ್ರ ಸರ್ಕಾರ ಇದುವರೆಗೆ ಅನುಮತಿ ನೀಡಿಲ್ಲ ಎಂದು ಹೇಳಿದ್ದಲ್ಲದೇ, ರಾಜ್ಯ ಕೊಟ್ಟ ತೆರಿಗೆಯನ್ನು ವಾಪಾಸ್‌ ಕೊಡುತ್ತಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ನಿರಂತರ ಸಭೆ ನಡೆಸಿ, ಕಾಮಗಾರಿಗಳ ಮೇಲ್ವಿಚಾರಣೆ ನಡೆಸುವಂತೆ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರಿಗೂ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!