spot_img
Tuesday, March 31, 2026
spot_img

ನಾನೇನೂ ತಪ್ಪು ಮಾಡಿಲ್ಲ, ಪಕ್ಷದ ಕೆಲಸ ಮಾಡಿದ್ದೇನೆ ಅಷ್ಟೇ : ಡಿಕೆಶಿ

ಜನಪ್ರತಿನಿಧಿ ವಾರ್ತೆ : ನನ್ನ ವಿರುದ್ಧದ ಸಿಬಿಐ ತನಿಖೆ ರದ್ದುಪಡಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್‌ಗೆ ಧನ್ಯವಾದಗಳು ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ತಮ್ಮ ಮೇಲಿನ ಆದಾಯ ಮೀರಿ ಆಸ್ತಿ ಗಳಿಕೆ ವಿಚಾರಕ್ಕೆ ಸಂಬಂಧಿಸಿ ಸರ್ಕಾರ ತೆಗೆದುಕೊಂಡ ಸಿಬಿಐ ಅನುಮತಿ ವಾಪಾಸ್‌  ಪಡೆದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಬಸನಗೌಡ ಯತ್ನಾಳ್‌ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದನ್ನು ವಿಚಾರಣೆಗೊಳಪಡಿಸಿದ ಹೈಕೋರ್ಟ್‌, ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ  ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮನವಿ ಹಿಂಪಡೆಯಲಾಗಿದೆ  ಎಂದು ನ್ಯಾಯಾಲಯ ತಿಳಿಸಿತ್ತು, ಇದಕ್ಕೆ ಸಂಬಂಧಿಸಿ, ತಮ್ಮ ಅಧಿಕೃತ ʼಎಕ್ಸ್‌ʼ ಸಾಮಾಜಿಕ ಜಾಲತಾಣದ ಖಾತೆಯ ಮೂಲಕ ಅವರು ಧನ್ಯವಾದ ಹೇಳಿದ್ದಾರೆ.

 ನಾನೇನೂ ತಪ್ಪು ಮಾಡಿಲ್ಲ, ಪಕ್ಷದ ಕೆಲಸ ಮಾಡಿದ್ದೇನೆ ಅಷ್ಟೇ. ಅದೇ ಕಾರಣಕ್ಕೆ ನನಗೆ ತೊಂದರೆ ನೀಡಿದ್ದಾರೆ ಅದರ ಪರಿಣಾಮ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಈ ಸಮಯದಲ್ಲಿ ಯಾರು ಏನು ಮಾತನಾಡಿದ್ದಾರೆ ಎಂಬುದನ್ನು ಗಮನಿಸಿದ್ದೇನೆ, ಎಲ್ಲರಿಗೂ ಒಳ್ಳೆಯದಾಗಲಿ. ಕಷ್ಟಕಾಲದಲ್ಲಿ ನನ್ನ ಜೊತೆ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!